ನವದೆಹಲಿ,ಜ.02 (DaijiworldNews/HR): ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕೇಂದ್ರ ಸಚಿವ, ರಾಜಸ್ಥಾನದ ಮಾಜಿ ಸಂಸದ, ಕಾಂಗ್ರೆಸ್ ನಾಯಕ ಬುಟಾ ಸಿಂಗ್ (86) ಶನಿವಾರ ನಿಧನರಾಗಿದ್ದಾರೆ.
ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬುಟಾ ಸಿಂಗ್ ಅವರಿಗೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆಂದು ತಿಳಿದುಬಂದಿದೆ.
ಬುಟಾ ಸಿಂಗ್ ಅವರು ಇಂದಿರಾ ಗಾಂಧಿ ಅವರ ಸಂಪುಟದಲ್ಲಿ ಸೇವೆ ಸಲ್ಲಿಸಿದ ಹಿರಿಯ ಕಾಂಗ್ರೆಸ್ ನಾಯಕ ಇವರಾಗಿದ್ದಾರೆ.
ಇನ್ನು ಬಿಹಾರ ಮತ್ತು ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿಯೂ ಬುಟಾ ಸಿಂಗ್ ಅವರು ಸೇವೆ ಸಲ್ಲಿಸಿದ್ದರು ಎನ್ನಲಾಗಿದೆ.