ಶ್ರೀನಗರ,ಜ.02 (DaijiworldNews/HR): ಭದ್ರತಾ ಪಡೆ ಮೇಲೆ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದು, ಎಂಟು ನಾಗರಿಕರು ಗಾಯಗೊಂಡ ಘಟನೆ ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯ ತ್ರಾಲ್ ಪ್ರದೇಶದಲ್ಲಿ ನಡೆದಿದೆ.
ಉಗ್ರರು ಶನಿವಾರ ಬೆಳಿಗ್ಗೆ 11.20ರ ಸುಮಾರಿಗೆ ಭದ್ರತಾ ಪಡೆಗಳನ್ನು ಗುರಿಯಾಗಿಸಿಕೊಂಡು ಗ್ರೆನೇಡ್ ದಾಳಿ ನಡೆಸಿದ್ದವು, ಆದರೆ ಅವರ ಗುರಿ ತಪ್ಪಿ ಗ್ರೆನೇಡ್ ಮಾರುಕಟ್ಟೆಯೊಂದರಲ್ಲಿ ಸ್ಫೋಟಿಸಿದ್ದು, 8 ನಾಗರಿಕರಿಗೆ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರ ಪರಿಸ್ಥಿತಿ ಸ್ಥಿರವಾಗಿದೆ ಎನ್ನಲಾಗಿದೆ.
ಉಗ್ರರಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.