ಕೋಲ್ಕತ್ತ, ಜ.02 (DaijiworldNews/PY): ಭಾರತ ಕ್ರಿಕೆಟ್ ತಂಡದ ಮಾಜಿ ಕ್ರಿಕೆಟಿಗ, ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ ಅಧ್ಯಕ್ಷ ಸೌರವ್ ಗಂಗೂಲಿ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಗಂಗೂಲಿ ಅವರಿಗೆ ದಿಢೀರ್ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಅವರನ್ನು ಕೋಲ್ಕತ್ತದ ವುಡ್ಲ್ಯಾಂಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಂಗೂಲಿ ಅವರು ಆಂಜಿಯೊಪ್ಲಾಸ್ಟಿ ಚಿಕಿತ್ಸೆ ಒಳಗಾಗಬಹುದು. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮೂಲಗಳು ಹೇಳಿವೆ.
ಈ ಬಗ್ಗೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಟ್ವೀಟ್ ಮಾಡಿದ್ದು, ಸೌರವ್ ಗಂಗೂಲಿ ಅವರಿಗೆ ಲಘು ಹೃದಯಾಘಾತವಾಗಿದೆ ಹಾಗೂ ಅವರನ್ನು ಆಸ್ಪತ್ರೆಗೆ ದಾಖಲಿಸಿಲಾಗಿದೆ ಎನ್ನುವ ಸುದ್ದಿ ಬೇಸರ ತಂದಿದೆ. ಅವರ ಶೀಘ್ರವೇ ಗುಣಮುಖರಾಗಲಿ. ನನ್ನ ಆಲೋಚನೆಗಳು ಹಾಗೂ ಪ್ರಾರ್ಥನೆ ಗಂಗೂಲಿ ಹಾಗೂ ಅವರ ಕುಟುಂಬದೊಂದಿಗಿದೆ ಎಂದಿದ್ದಾರೆ.