ಹೊಸದಿಲ್ಲಿ, ಜ.02 (DaijiworldNews/HR): ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಮಸೂದೆಯನ್ನು ಖಂಡಿಸಿ ದೆಹಲಿ ಗಡಿಯಲ್ಲಿ ರೈತರು ಪ್ರತಿಭಟಿಸುತ್ತಿರುವ ಸ್ಥಳದಲ್ಲಿ ಉತ್ತರಪ್ರದೇಶದ 75ರ ವಯಸ್ಸಿನ ರೈತ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಪ್ರಕರಣದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದು, ಮೃತ ರೈತ ಕುಶ್ಮಿರ್ ಸಿಂಗ್ ಅವರು ಬರೆದಿಟ್ಟಿದ್ದ ಡೆತ್ ನೋಟನ್ನು ವಶಕ್ಕೆ ಪಡೆದಿದ್ದಾರೆ.
ಇನ್ನು ಹೊಸ ಕೃಷಿ ಮಸೂದೆಗಳನ್ನು ರದ್ದುಪಡಿಸಬೇಕೆಂಬ ರೈತರ ಬೇಡಿಕೆಗೆ ಸರಕಾರದೊಂದಿಗಿನ ಮಾತುಕತೆಯಲ್ಲಿ ಯಾವುದೇ ಫಲಿತಾಂಶ ಬಾರದೆ ಇರುವುದಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಬರೆದಿದ್ದಾರೆ ಎಂದು ತಿಳಿದು ಬಂದಿದೆ.
ಮೃತಪಟ್ಟ ರೈತನ ಜೊತೆಗೆ ಆತನ ಮಗ ಹಾಗೂ ಮೊಮ್ಮಗನೂ ಪ್ರತಿಭಟನೆ ನಡೆಸುತ್ತಿದ್ದರು ಎನ್ನಲಾಗಿದೆ.