ಕೋಲ್ಕತಾ, ಜ. 03 (DaijiworldNews/MB) : ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಹಾಲಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರಿಗೆ ಆ್ಯಂಜಿಯೋ ಪ್ಲಾಸ್ಟಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ.
ಶನಿವಾರ 48 ವರ್ಷದ ಸೌರವ್ ಗಂಗೂಲಿ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಅವರನ್ನು ಕೋಲ್ಕತ್ತದ ವುಡ್ಲ್ಯಾಂಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಈ ಬಗ್ಗೆ ಮಾಹಿತಿ ನೀಡಿರುವ ವುಡ್ಲ್ಯಾಂಡ್ ಆಸ್ಪತ್ರೆಯ ವೈದ್ಯ ಡಾ. ಅಫ್ತಾಬ್ ಖಾನ್ ಅವರು, ''ಗಂಗೂಲಿ ಅವರಿಗೆ ಪ್ರಸ್ತುತ ಆ್ಯಂಜಿಯೋ ಪ್ಲಾಸ್ಟಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಅ್ಯಂಜಿಯೋಪ್ಲ್ಯಾಸ್ಟಿ ಚಿಕಿತ್ಸೆಯ ಬಳಿಕ ಗಂಗೂಲಿ ಸಂಪೂರ್ಣ ಪ್ರಜ್ಞಾ ಸ್ಥಿತಿಗೆ ಬಂದಿದ್ದಾರೆ. ಪ್ರಸ್ತುತ ಅವರ ಆರೋಗ್ಯದ ಮೇಲೆ 24 ಗಂಟೆಗಳ ಕಾಲ ನಿಗಾವಹಿಸಲಾಗುತ್ತಿದೆ. ಅವರ ಆರೋಗ್ಯ ಸ್ಥಿರವಾಗಿದೆ. ಹೃದಯದಲ್ಲಿ ಎರಡು ಅಡೆತಡೆಗಳಿದೆ, ಅದಕ್ಕೆ ಚಕಿತ್ಸೆ ನೀಡಲಾಗುತ್ತದೆ'' ಎಂದು ತಿಳಿಸಿದ್ದಾರೆ.
ಇನ್ನು ಅವರ ಕೊರೊನಾ ವರದಿ ನೆಗೆಟಿವ್ ಆಗಿದೆ ಎಂದು ವರದಿಯಾಗಿದೆ.