ಚಿತ್ರದುರ್ಗ, ಜ.03 (DaijiworldNews/PY): ಕೇಂದ್ರ ಸಚಿವ, ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ ಅವರು ಅನಾರೋಗ್ಯದ ಹಿನ್ನೆಲೆ ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಶುಗರ್ ಲೋ ಆದ ಕಾರಣ ಸದಾನಂದ ಗೌಡ ಅವರು ಅಸ್ವಸ್ಥರಾಗಿದ್ದು, ಅವರನ್ನು ಚಿತ್ರದುರ್ಗ ನಗರದ ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಿವಮೊಗ್ಗದಲ್ಲಿ ಬಿಜೆಪಿ ಸಭೆ ಮುಗಿಸಿ ಬರುವಾಗ ಘಟನೆ ನಡೆದಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.