ಮಂಗಳೂರು, ಜ 03 (DaijiworldNews/SM): ದಕ್ಷಿಣ ಕನ್ನಡ ಜಿಲ್ಲೆಯ ಆರೋಗ್ಯ ಬುಲೆಟಿನ್ ಪ್ರಕಾರ ಜಿಲ್ಲೆಯಲ್ಲಿ ಭಾನುವಾರ 30 ಹೊಸ ಕೊರೋನಾ ವೈರಸ್ ಪ್ರಕರಣಗಳು ಪತ್ತೆಯಾಗಿದ್ದು, ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 32,978ಕ್ಕೆ ಏರಿಕೆಯಾಗಿದೆ. ಈ ಪೈಕಿ 378 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ.
ಜಿಲ್ಲೆಯಲ್ಲಿ ಇಲ್ಲಿಯ ತನಕ ಒಟ್ಟು 4,95,428 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಅದರಲ್ಲಿ 4,62,450 ನಕಾರಾತ್ಮಕವಾಗಿದೆ. ಭಾನುವಾರ 19 ಜನರನ್ನು ಬಿಡುಗಡೆ ಮಾಡಲಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 31,868ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 732 ಸಾವುಗಳು ಸಂಭವಿಸಿವೆ.
ಉಡುಪಿ ಜಿಲ್ಲೆಯ ಕೊರೋನಾ ವರದಿ:
ಭಾನುವಾರ 20 ಹೊಸ ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು ಕೊರೋನಾ ವೈರಸ್ ಪ್ರಕರಣಗಳ ಸಂಖ್ಯೆ 23,104ಕ್ಕೆ ಏರಿಕೆಯಾಗಿದೆ. ಈ ಪೈಕಿ 96 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ. ಇಲ್ಲಿಯವರೆಗೆ 2,91,756ಕ್ಕೂ ಹೆಚ್ಚು ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಅದರಲ್ಲಿ 2,68,652 ನಕಾರಾತ್ಮಕವಾಗಿವೆ. ಭಾನುವಾರ ನಾಲ್ಕು ರೋಗಿಗಳನ್ನು ಬಿಡುಗಡೆ ಮಾಡಲಾಗಿದೆ. ಒಟ್ಟು ಗುಣಮುಖರಾದವರ ಸಂಖ್ಯೆ 22,820ಕ್ಕೆ ಏರಿಕೆಯಾಗಿದೆ.
ಈವರೆಗೆ ಒಟ್ಟು 188 ಸಾವುಗಳು ಸಂಭವಿಸಿವೆ.