ಹೈದರಾಬಾದ್, ಜ. 04 (DaijiworldNews/MB) : ನವದೆಹಲಿ–ಬೆಂಗಳೂರು ರಾಜಧಾನಿ ಎಕ್ಸ್ಪ್ರೆಸ್ ರೈಲಿನ ಇಂಜಿನ್ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಯಾವುದೇ ಅನಾಹುತವಾಗಿಲ್ಲ ಎಂದು ರೈಲ್ವೆ ಇಲಾಖೆ ತಿಳಿಸಿದೆ.
ಈ ಬಗ್ಗೆ ಮಾಹಿತಿ ನೀಡಿರುವ ದಕ್ಷಿಣ ರೈಲ್ವೆ ವಿಭಾಗದ ಅಧಿಕಾರಿಗಳು, ''ನವದೆಹಲಿಯಿಂದ ಬೆಂಗಳೂರು ಕಡೆಗೆ ರಾಜಧಾನಿ ಎಕ್ಸ್ಪ್ರೆಸ್ ರೈಲು ಬರುತ್ತಿದ್ದು, ರವಿವಾರ ರಾತ್ರಿ 9 ಗಂಟೆಗೆ ಸುಮಾರಿಗೆ ತೆಲಂಗಾಣದ ವಿಕರಾಬಾದ್ ಜಿಲ್ಲೆ ನವಾಂಡ್ಗಿ ರೈಲು ನಿಲ್ದಾಣದ ಸಮೀಪ ರೈಲಿನ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ರೈಲು ನಿಲ್ಲಿಸಲಾಗಿದ್ದು ಬೋಗಿಗಳಿಂದ ಇಂಜಿನ್ನನ್ನು ಬೇರ್ಪಡಿಸಲಾಗಿದೆ'' ಎಂದು ತಿಳಿಸಿದ್ದಾರೆ.
ಇನ್ನು ಈ ಬಗ್ಗೆ ರೈಲ್ವೆ ಪೊಲೀಸರು ಮಾತನಾಡಿ, ''ಇಂಜಿನ್ ಬದಲಾಯಿಸಿ ರಾಜಧಾನಿ ಎಕ್ಸ್ಪ್ರೆಸ್ ರೈಲು ತಡವಾಗಿ ಸಂಚಾರ ಆರಂಭಿಸಿದೆ. ಆದರೆ ಈ ಅಗ್ನಿ ಅವಘಡದಲ್ಲಿ ಯಾವುದೇ ಅನಾಹುತವಾಗಿಲ್ಲ'' ಎಂದು ಮಾಹಿತಿ ನೀಡಿದ್ದಾರೆ.