ಬೆಂಗಳೂರು, ಜ. 04 (DaijiworldNews/MB) : ರಾಜ್ಯದಲ್ಲಿ ಮತ್ತೆ ಚೇತರಿಕೆ ಪ್ರಮಾಣವನ್ನು ಹೊಸ ಕೊರೊನಾ ಸೋಂಕು ಪ್ರಕರಣಗಳು ಮೀರಿಸಿದೆ. ರಾಜ್ಯದಲ್ಲಿ ಒಂದೇ ದಿನದಲ್ಲಿ 810 ಮಂದಿಗೆ ಕೊರೊನಾ ಪಾಸಿಟಿವ್ ಆಗಿದ್ದು, ಒಂದು ದಿನದಲ್ಲಿ 743 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಹಲವು ದಿನಗಳ ಬಳಿಕ ರಾಜ್ಯದಲ್ಲಿ ಚೇತರಿಕೆ ಪ್ರಮಾಣವನ್ನು ಹೊಸ ಕೊರೊನಾ ಸೋಂಕು ಪ್ರಕರಣಗಳು ಮೀರಿಸಿದೆ ಎಂದು ರಾಜ್ಯ ಆರೋಗ್ಯ ಬುಲೆಟಿನ್ ತಿಳಿಸಿದೆ.
ಶನಿವಾರ 810 ಹೊಸ ಪ್ರಕರಣಗಳು ದಾಖಲಾಗಿದ್ದು, ರಾಜ್ಯದಲ್ಲಿ 10,893 ಸಕ್ರಿಯ ಪ್ರಕರಣಗಳು ಸೇರಿದಂತೆ ಒಟ್ಟು ಸೋಂಕು ಪ್ರಕರಣಗಳ ಸಂಖ್ಯೆ 9,21,938 ಕ್ಕೆ ಏರಿಕೆಯಾಗಿದೆ. 743 ಮಂದಿ ಗುಣಮುಖರಾಗಿದ್ದು ಒಟ್ಟು ಚೇತರಿಕೆ ಸಂಖ್ಯೆ 8,98,919 ಕ್ಕೆ ಏರಿದೆ ಎಂದು ಬುಲೆಟಿನ್ ತಿಳಿಸಿದೆ.
ಕಳೆದ 24 ಗಂಟೆಗಳಲ್ಲಿ ಎಂಟು ಮಂದಿ ಸೋಂಕಿತರು ಸಾವನ್ನಪ್ಪಿದ್ದು ರಾಜ್ಯದಲ್ಲಿ ಒಟ್ಟು ಸಾವಿನ ಸಂಖ್ಯೆ 12,107 ಕ್ಕೆ ತಲುಪಿದೆ.
ರಾಜ್ಯಾದ್ಯಂತ ತೀವ್ರ ನಿಗಾ ಘಟಕಗಳಲ್ಲಿ (ಐಸಿಯು) 186 ರೋಗಿಗಳಿದ್ದಾರೆ. ಬೆಂಗಳೂರಿನಲ್ಲಿ 81 ಮಂದಿ, ತುಮಕೂರಿನಲ್ಲಿ 14, ಕಲಬುರಗಿಯಲ್ಲಿ 11 ಮತ್ತು ಹಾಸನದಲ್ಲಿ 10 ರೋಗಿಗಳು ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕಗಳಲ್ಲಿ ಇದ್ದಾರೆ.