ಹರಿಯಾಣ, ಜ.04 (DaijiworldNews/PY): ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಗಡಿಯಲ್ಲಿ ಪ್ರತಿಭಟನೆನಿರತರಾದ ರೈತರ ಗುಂಪಿಗೆ ಸೇರಲು ಅವರತ್ತ ಧಾವಿಸುತ್ತಿದ್ದ ಹರಿಯಾಣದ ರೈತರನ್ನು ರವಿವಾರ ಪೊಲೀಸರು ತಡೆದಿದ್ದಾರೆ. ಈ ಸಂದರ್ಭ ಘರ್ಷಣೆ ನಡೆದಿದ್ದು, ಪೊಲೀಸರು ಅಶ್ರುವಾಯು ಸಿಡಿಸಿದ ಘಟನೆ ನಡೆದಿದೆ.
ಈ ಘಟನೆಯು ರೆವಾರಿ-ಅಲ್ವಾರ್ ಗಡಿಯಲ್ಲಿ ನಡೆದಿದ್ದು, ಬ್ಯಾರೀಕೇಡ್ಗಳನ್ನು ಮುರಿದು ಮುಂದೆ ಸಾಗಲು ರೈತರು ಯತ್ನಿಸಿದ್ದು, ಈ ವೇಳೆ ಪೊಲೀಸರು ಕೆಲವು ಸುತ್ತು ಅಶ್ರುವಾಯು ಸಿಡಿದ್ದಾರೆ.
ಇಂದು ಕೇಂದ್ರ ಸರ್ಕಾರ, ಸಿಂಘು ಗಡಿಯಲ್ಲಿ ಪ್ರತಿಭಟನಾನಿರತ ರೈತರೊಂದಿಗೆ ಮತ್ತೊಂದು ಸುತ್ತಿನ ಮಾತುಕತೆ ನಡೆಸಲಿದೆ. ತಮ್ಮ ಬೇಡಿಕೆಗಳನ್ನು ಕೇಂದ್ರ ಸರ್ಕಾರ ಈಡೇರಿಸದೇ ಇದ್ದಲ್ಲಿ ಜ.26ರಂದು ದೆಹಲಿಯಲ್ಲಿ ಟ್ರಾಕ್ಟರ್ಪರೇಡ್ ನಡೆಸುವುದಾಗಿ ರೈತರು ಎಚ್ಚರಿಕೆ ನೀಡಿದ್ದಾರೆ.