ಬೆಂಗಳೂರು, ಜ.04 (DaijiworldNews/HR): ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರೈಲು ಪ್ರಯಾಣದ ಕನಸು ಸಾಕಾರಗೊಂಡಿದ್ದು, ಕೆಎಸ್ಆರ್ ರೈಲು ನಿಲ್ದಾಣದಿಂದ ದೇವನಹಳ್ಳಿಗೆ ಡೆಮು ರೈಲು ಸಂಚಾರ ಆರಂಭವಾಗಿದೆ.
ಡೆಮು ರೈಲು ಕೆಎಸ್ಆರ್ ರೈಲು ನಿಲ್ದಾಣದಿಂದ ಹೊರಟು ಬೆಳಿಗ್ಗೆ 6.02ಕ್ಕೆ ವಿಮಾನ ನಿಲ್ದಾಣ ಬಳಿಯ ಹಾಲ್ಟ್ ಸ್ಟೇಷನ್ಗೆ ತಲುಪಿತು. ಆ ಮೂಲಕ ಹೊಸ ಹಾಲ್ಟ್ ಸ್ಟೇಷನ್ ಸಾರ್ವಜನಿಕರ ಸೇವೆಗೆ ಮುಕ್ತವಾಯಿತು ಎನ್ನಲಾಗಿದೆ.
ಇನ್ನು ಡೆಮು ರೈಲಿನಲ್ಲಿ ಸಂಸದ ಪಿ.ಸಿ. ಮೋಹನ್ ಮತ್ತು ರೈಲ್ವೆ ಇಲಾಖೆ ಹಿರಿಯ ಅಧಿಕಾರಿಗಳು ಪ್ರಯಾಣಿಸಿದರು.
ರೈಲುಗಳ ವೇಳಾಪಟ್ಟಿ, ಪ್ರಯಾಣಿಕರ ಆಸನ ವ್ಯವಸ್ಥೆ, ಟಿಕೆಟ್ ಕೌಂಟರ್, ಕಾಫಿ ಶಾಪ್ ಸೇರಿ ಎಲ್ಲಾ ಸೌಲಭ್ಯಗಳನ್ನು ಒಳಗೊಂಡು ಸುಸಜ್ಜಿತ ರೈಲು ನಿಲ್ದಾಣ ಇದಾಗಿದೆ ಎಂದು ತಿಳಿದು ಬಂದಿದೆ.