ಮಂಗಳೂರು, ಜ.04 (DaijiworldNews/PY): ಟೋಲ್ ಹಣ ಕೇಳಿದ್ದಕ್ಕೆ ಟೋಲ್ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಸೋಮವಾರ ಮಂಗಳೂರು ಹೊರವಲಯದ ಸುರತ್ಕಲ್ನಲ್ಲಿರುವ ಟೋಲ್ನಲ್ಲಿ ನಡೆದಿದೆ.
ಕಾರು ಭಟ್ಕಳ ರಿಜಿಸ್ಟ್ರೇಷನ್ನಂಬರ್ನದ್ದಾಗಿದ್ದು, KA 47 M 2946, 12 A 19 MD 7338 ಎಂದು ತಿಳಿದುಬಂದಿದೆ.
ಕಾರಿನಲ್ಲಿದ್ದ ಏಳು ಮಂದಿ ಟೋಲ್ ಸಿಬ್ಬಂದಿಯ ಮೇಲೆ ಹಲ್ಲೆ ಮಾಡಿದ್ದಾರೆ. ಘಟನೆಯಲ್ಲಿ ಟೋಲ್ ಸಿಬ್ಬಂದಿಯ ಕೈ ಮುರಿತಕ್ಕೊಳಗಾಗಿದ್ದು, ಹಲ್ಲೆ ಮಾಡಿದ ಬಳಿಕ ಕಾರು ಪ್ರಯಾಣಿಕರು ಘಟನಾ ಸ್ಥಳದಿಂದ ಪರಾರಿಯಾಗಿದ್ದಾರೆ.
ಈ ಬಗ್ಗೆ ಟೋಲ್ ಸಿಬ್ಬಂದಿಗಳು ಪೊಲೀಸರಿಗೆ ದೂರು ನೀಡಿದ್ದು, ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.