ಚಾಮರಾಜನಗರ, ಜ. 04 (DaijiworldNews/MB) : 2020ನೇ ಸಾಲಿನ ಜಾನಪದ ಅಕಾಡೆಮಿ ಪ್ರಶಸ್ತಿಗಳನ್ನು ಅಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿಯವರು ಪ್ರಕಟಿಸಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಡಾ.ಗಾಯತ್ರಿ ನಾವಡ ಅವರನ್ನು ಡಾ.ಜೀ.ಶಂ.ಪ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಹಾಗೆಯೇ ದಕ್ಷಿಣ ಕನ್ನಡ ಜಿಲ್ಲೆಯ ಗೋಪಾಲಕೃಷ್ಣ ಬಂಗೇರಾ ಅವರಿಗೆ ಜಾನಪದ ಅಕಾಡೆಮಿ ಪ್ರಶಸ್ತಿ ದೊರೆತಿದೆ.
ಅಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ
30 ಜಿಲ್ಲೆಗಳ ತಲಾ ಒಬ್ಬ ಜಾನಪದ ಕಲಾವಿದರು ಮತ್ತು ಇಬ್ಬರನ್ನು ತಜ್ಞ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಡಾ.ಗಾಯತ್ರಿ ನಾವಡ ಅವರನ್ನು ಡಾ.ಜೀ.ಶಂ.ಪ ಪ್ರಶಸ್ತಿಗೆ ಹಾಗೂ ಕಲ್ಬುರ್ಗಿ ಜಿಲ್ಲೆಯ ಪ್ರೊ.ಬಸವರಾಜ ಸಬರದ ಅವರನ್ನು ಡಾ.ಬಿ.ಎಸ್. ಗದ್ದಗೀಮಠ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮವು ಚಾಮರಾಜನಗರದಲ್ಲಿ ಫೆಬ್ರವರಿ ಮೊದಲ ವಾರದಲ್ಲಿ ನಡೆಯಲಿದೆ ಎಂದು ಮಂಜಮ್ಮ ಜೋಗತಿ ತಿಳಿಸಿದ್ದಾರೆ.
2020ನೇ ಸಾಲಿನ ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತರು