ಬೆಂಗಳೂರು, ಜ.04 (DaijiworldNews/PY): ರಕ್ತದಲ್ಲಿ ಸಕ್ಕರೆ ಅಂಶ ಕಡಿಮೆಯಾದ ಹಿನ್ನೆಲೆ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರನ್ನು ಸೋಮವಾರ ಸಿಎಂ ಬಿಎಸ್ ಯಡಿಯೂರಪ್ಪ ಅವರು ಭೇಟಿ ಮಾಡಿದ್ದು, ಆರೋಗ್ಯ ವಿಚಾರಿಸಿದರು.
ನಗರದ ಅಸ್ಟರ್ ಸಿಎಂಐ ಆಸ್ಪತ್ರೆಯಲ್ಲಿ ಸದಾನಂದ ಗೌಡ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಸಿಎಂ ಬಿಎಸ್ವೈ ಅವರೊಂದಿಗೆ ಉಪಮುಖ್ಯಮಂತ್ರಿಗಳಾದ ಸಿ.ಎಸ್. ಅಶ್ವತ್ಥ್ ನಾರಾಯಣ, ಲಕ್ಷ್ಮಣ ಸವದಿ ಹಾಗೂ ಸಮಾಜ ಹಾಗೂ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಅವರು ಆಸ್ಪತ್ರೆಗೆ ಭೇಟಿ ನೀಡಿದ್ದು, ಸದಾನಂದ ಗೌಡ ಅವರ ಆರೋಗ್ಯ ವಿಚಾರಿದ್ದಾರೆ.
ಶಿವಮೊಗ್ಗದಲ್ಲಿ ನಡೆದು ಬಿಜಿಪಿ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡು ಬೆಂಗಳೂರಿಗೆ ವಾಪಸ್ಸಾಗುತ್ತಿದ್ದ ಸಂದರ್ಭ ಚಿತ್ರದುರ್ಗದಲ್ಲಿ ಸದಾನಂದ ಗೌಡ ಅವರ ಆರೋಗ್ಯದಲ್ಲಿ ಕಂಡುಬಂದಿದ್ದು, ಬಳಿಕ ಕೂಡಲೇ ಅವರನ್ನು ಚಿತ್ರದುರ್ಗದಲ್ಲಿನ ಬಸವೇಶ್ವರ ವೈದ್ಯಕೀಯ ಕಾಲೇಜು ಆಸ್ಪತ್ರೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಬೆಂಗಳೂರಿಗೆ ಕರೆತರಲಾಯಿತು.