ನವದೆಹಲಿ, ಜ.04 (DaijiworldNews/HR): "ಕೇಂದ್ರ ಸರ್ಕಾರವು ಜಾರಿಗೊಳಿಸಿರುವ ಮೂರು ಕೃಷಿ ಕಾಯ್ದೆಯನ್ನು ರದ್ದುಗೊಳಿಸಿ, ಪ್ರತಿಭಟನಾ ನಿರತ ರೈತ ಸಂಘಟನೆಗಳ ಎಲ್ಲ ಬೇಡಿಕೆಗಳನ್ನು ಸ್ವೀಕರಿಸಿ" ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, "ಮಳೆ ಮತ್ತು ತೀವ್ರ ಶೀತದ ನಡುವೆಯೂ ರಸ್ತೆಗಳಲ್ಲಿ ಪ್ರತಿಭಟಿಸುತ್ತಿರುವ ರೈತರ ಸಂಕಲ್ಪಕ್ಕೆ ನಮಸ್ಕಾರಗಳು, ರೈತರ ಎಲ್ಲಾ ಬೇಡಿಕೆಗಳನ್ನು ಅಂಗೀಕರಿಸಿ ಮತ್ತು ಸಭೆಯಲ್ಲಿ ಮೂರು ವಿವಾದಿತ ಕೃಷಿ ಕಾನೂನುಗಳನ್ನು ರದ್ದುಪಡಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತಿದ್ದೇನೆ" ಎಂದರು.
ಇನ್ನು ದೆಹಲಿಯಲ್ಲಿ ತೀವ್ರ ಚಳಿಯ , ಮಳೆಯ ಮಧ್ಯೆಯು ಬೇಡಿಕೆ ಈಡೇರುವವರೆಗೆ ತಮ್ಮ ಪ್ರತಿಭಟನೆ ಮುಂದುವರಿಸುತ್ತೇವೆ ಎಂದು ರೈತರು ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ.