ಪಲ್ಗಾರ್,ಜ.05 (DaijiworldNews/HR): ಅಮ್ಮನೊಂದಿಗೆ ಮಲಗಿದ್ದ ಮೂರು ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಿದ ಘಟನೆ ಮಹಾರಾಷ್ಟ್ರದ ಪಲ್ಗಾರ್ ಜಿಲ್ಲೆಯಲ್ಲಿ ನಡೆದಿದೆ.
ತಲಸಾರಿ ತಾಲೂಕಿನ ಗ್ರಾಮವೊಂದರ ಗುಡಿಸಲಿನಲ್ಲಿ ತನ್ನ ತಾಯಿಯೊಂದಿಗೆ ಮಲಗಿದ್ದ ಬಾಲಕಿಯನ್ನು 38 ವರ್ಷದ ವ್ಯಕ್ತಿಯೊಬ್ಬ ಕರೆದೊಯ್ದಿದ್ದಾನೆ ಎನ್ನಲಾಗಿದೆ.
ಆರೋಪಿಯು ಮಗುವನ್ನು ಅಪಹರಿಸಿಕೊಂಡು ಹತ್ತಿರದ ಹೊಲಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ನಂತರ ಬಾಲಕಿಯನ್ನು ಸ್ಥಳದಲ್ಲಿಯೇ ಬಿಟ್ಟು ಆತ ಪರಾರಿಯಾಗಿದ್ದಾನೆ. ಬಳಿಕ ಆಕೆಯನ್ನು ಹೊಲದಲ್ಲಿ ಕಂಡ ಮಗುವಿನ ಪೋಷಕರು ಗ್ರಾಮೀಣ ಆಸ್ಪತ್ರೆಗೆ ಕರೆದೊಯ್ದಿದ್ದು, ಸದ್ಯ ಅಲ್ಲಿ ಬಾಲಕಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದುಇನ್ಸ್ಪೆಕ್ಟರ್ ಅಜಯ್ ವಾಸವೆ ತಿಳಿಸಿದ್ದಾರೆ.
ಆರೋಪಿಯ ವಿರುದ್ಧ ಅತ್ಯಾಚಾರ, ಅಪಹರಣ ಮತ್ತು ಪೋಕ್ಸೊ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.