ಶಿವಮೊಗ್ಗ, ಜ.05 (DaijiworldNews/HR): ಸಿದ್ದರಾಮಯ್ಯನವರ ಸರ್ವಾಧಿಕಾರಿ ಧೋರಣೆಯಿಂದ ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ನಿರ್ನಾಮವಾಗಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಈ ಕುರಿತು ಶಿವಮೊಗ್ಗದಲ್ಲಿ ಮಾತನಾಡಿದ ಅವರು," ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯನವರು ಮುಂದಿನ ಮುಖ್ಯಮಂತ್ರಿಯಾಗುವ ಕನಸು ಕಾಣುತ್ತಿದ್ದು ಅದು ನನಸಾಗುವುದಿಲ್ಲ, ಸಿದ್ದರಾಮಯ್ಯ ಹಗಲು ಹಾಗೂ ರಾತ್ರಿ ಎರಡು ವೇಳೆಯಲ್ಲೂ ಕನಸು ಕಾಣುತ್ತಿದ್ದಾರೆ" ಎಂದರು.
ಇನ್ನು "ಕರ್ನಾಟಕದಲ್ಲಿ ಬಿಜೆಪಿಯು ಶೇ.60 ರಷ್ಟು ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಗೆದ್ದಿದೆ. ಮುಂದಿನ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿಯಲ್ಲಿ ಗೆಲ್ಲುವ ಗುರಿ ಹೊಂದಿದ್ದೇವೆ. ಜೊತೆಗೆ ವಿಧಾನಸಭೆಯಲ್ಲೂ ಗೆಲ್ಲುವ ನಿಟ್ಟಿನಲ್ಲಿ ಪಕ್ಷ ನಿಲುವು ತೆಗೆದುಕೊಂಡಿದೆ" ಎಂದು ಹೇಳಿದ್ದಾರೆ.