ಮಂಗಳೂರು, ಜ. 05 (DaijiworldNews/MB) : ಮಂಗಳೂರು ತಹಶೀಲ್ದಾರ್ ಕಚೇರಿಗೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ದ್ವಿತೀಯ ದರ್ಜೆ ಸಹಾಯಕ (ಎಸ್ಡಿಎ) ಸಿಬ್ಬಂದಿಯೊಬ್ಬರನ್ನು ರೆಡ್ಹ್ಯಾಂಡ್ ಆಗಿ ಮಂಗಳವಾರ ಬಂಧಿಸಿದ್ದಾರೆ.
ಎಸ್ಡಿಎ ಸಿಬ್ಬಂದಿ ರಫೀಕ್ ಅಬ್ದುಲ್(42) ಬಂಧಿತ ಆರೋಪಿ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.
ಕಚೇರಿಯ ಕೆಲಸ ಮಾಡಿಕೊಡಲು ವ್ಯಕ್ತಿಯೊಬ್ಬರಿಗೆ 40 ಸಾವಿರ ರೂ. ಬೇಡಿಕೆ ಇಟ್ಟಿದ್ದ ಎಂಬ ಆರೋಪ ರಫೀಕ್ ಮೇಲಿತ್ತೆನ್ನಲಾಗಿದೆ. ಈ ಬಗ್ಗೆ ಸಂತ್ರಸ್ತರೊಬ್ಬರು ಎಸಿಬಿ ಕಚೇರಿಗೆ ದೂರು ನೀಡಿದ್ದರು. ಎಸಿಬಿ ಮಾರ್ಗದರ್ಶನದಂತೆ ದೂರುದಾರ ವ್ಯಕ್ತಿ ಆರೋಪಿ ಸಿಬ್ಬಂದಿಗೆ ನಗದು ನೀಡುತ್ತಿದ್ದ ಸಂದರ್ಭ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಆರೋಪಿಯನ್ನು ಬಂಧಿಸಿ ನಗದು ವಶಕ್ಕೆ ಪಡೆಯಲಾಗಿದೆ ಎಂದು ಎಸಿಬಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.