ಬೆಂಗಳೂರು, ಜ. 06 (DaijiworldNews/MB) : ಕರ್ನಾಟಕದ ಮಾಜಿ ಮುಖ್ಯಮಂತ್ರಿ ದಿವಂಗತ ಆರ್.ಗುಂಡೂರಾವ್ ಅವರ ಪತ್ನಿ ಹಾಗೂ ಕೆಪಿಸಿಸಿ ಮಾಜಿ ಅಧ್ಯಕ್ಷ, ಶಾಸಕ ದಿನೇಶ್ ಗುಂಡೂರಾವ್ ಅವರ ತಾಯಿ ವರಲಕ್ಷ್ಮೀ ಗುಂಡೂರಾವ್ (72) ವಿಧಿವಶರಾಗಿದ್ದಾರೆ.
72 ವರ್ಷ ಪ್ರಾಯದ ಅವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಂಗಳವಾರ ತಡರಾತ್ರಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಮೃತರ ಪಾರ್ಥಿವ ಶರೀರ ಅಂತಿಮ ಕ್ರಿಯೆಯು ಬುಧವಾರ ದೇವನಹಳ್ಳಿ ತೋಟದಲ್ಲಿ ನಡೆಯಲಿದೆ ಎಂದು ವರದಿ ತಿಳಿಸಿದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಡಿಕೆಶಿ ಸಾವಿಗೆ ಸಂತಾಪ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ. ''ಮಾಜಿ ಮುಖ್ಯಮಂತ್ರಿ ಗುಂಡೂರಾವ್ ಅವರ ಪತ್ನಿ ವರಲಕ್ಷ್ಮೀ ಗುಂಡೂರಾವ್ ಅವರ ಅವರ ನಿಧನದ ಸುದ್ದಿ ಕೇಳಿ ತೀವ್ರ ದುಃಖವಾಯಿತು. ದಿನೇಶ್ ಗುಂಡೂರಾವ್ ಹಾಗೂ ಅವರ ಕುಟುಂಬಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸುತ್ತೇನೆ'' ಎಂದು ಹೇಳಿದ್ದಾರೆ.