ಮಂಗಳೂರು, ಜ.06 (DaijiworldNews/PY): ಪಾಣೆಮಂಗಳೂರಿನಲ್ಲಿ ಕಾಂಗ್ರೆಸ್ ಮೈಸೂರು ವಿಭಾಗೀಯ ಮಟ್ಟದ ಪ್ರತಿನಿಧಿ ಸಂಕಲ್ಪ ಸಮಾವೇಶ ನಡೆಯಲಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗಮಿಸಿದ್ದಾರೆ.
ಪಾಣೆಮಂಗಳೂರಿನ ಸಾಗರ್ ಆಡಿಟೋರಿಯಂ ಸಭಾಂಗಣದಲ್ಲಿ ನಡೆಯಲಿರುವ ಈ ಸಮಾವೇಶದಲ್ಲಿ ಸುಮಾರ 677 ಮಂದಿ ಭಾಗವಹಿಸಲಿದ್ದು, ಸಮಾವೇಶದಲ್ಲಿ ಪಕ್ಷ ಸಂಘಟನೆ, ಗ್ರಾಮ ಪಂಚಾಯತ್ ಚುನಾವಣೆ ಫಲಿತಾಂಶದ ವಿಚಾರವಾಗಿ ಚರ್ಚೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.
ಮಾಜಿ ಸಚಿವ ರಮಾನಾಥ ರೈ ಅವರ ಕ್ಷೇತ್ರದಲ್ಲಿ ನಡೆಯಲಿರುವ ಈ ಸಮಾವೇಶಕ್ಕೆ ಬಿ.ಕೆ ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್.ಆರ್ ಪಾಟೀಲ್ ಭಾಗಿಯಾಗಲಿದ್ದಾರೆ.