ಮುಂಬೈ, ಜ. 06 (DaijiworldNews/MB) : ಪಂಜಾಬ್ ಮಹಾರಾಷ್ಟ್ರ ಕೋ ಆಪರೇಟಿವ್ (ಪಿಎಂಸಿ) ಬ್ಯಾಂಕ್ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಶಿವಸೇನಾ ಪಕ್ಷದ ನಾಯಕ ಸಂಜಯ್ ರಾವತ್ ಪತ್ನಿ ವರ್ಷಾ ರಾವತ್ಗೆ ಜಾರಿ ನಿರ್ದೇಶನಾಲಯ ಬುಧವಾರ ಮತ್ತೆ ಸಮನ್ಸ್ ಜಾರಿ ಮಾಡಿದೆ.
ಜನವರಿ 11ರಂದು ವಿಚಾರಣೆಗೆ ಮುಂಬೈನಲ್ಲಿ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗುವಂತೆ ವರ್ಷಾ ರಾವತ್ಗೆ ಸೂಚನೆ ನೀಡಲಾಗಿದೆ ಎಂದು ವರದಿ ತಿಳಿಸಿದೆ.
ಈ ಹಿಂದೆಯೂ ಸಂಜಯ್ ರಾವತ್ ಅವರ ಪತ್ನಿ ವರ್ಷಾಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿಗೊಳಿಸಿದ್ದು, ಡಿ.29ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು.
ಇನ್ನು ಪಿಎಂಸಿ ಬ್ಯಾಂಕ್ ಹಗರಣದ ಆರೋಪಿಯಾಗಿರುವ ಪ್ರವೀಣ್ ರಾವತ್ರೊಂದಿಗೆ ವರ್ಷಾ ರಾವತ್ 50 ಲಕ್ಷ ರೂಪಾಯಿ ವಹಿವಾಟು ನಡೆಸಿರುವ ಆರೋಪದಲ್ಲಿ ತನಿಖೆ ನಡೆಸಲಾಗುತ್ತಿದೆ. ಜಮೀನು ಖರೀದಿಸುವುದಕ್ಕೆ ಸಾಲ ರೂಪದಲ್ಲಿ ಈ ಹಣವನ್ನು ಪಡೆಯಲಾಗಿದೆ ಎಂದು ಕೂಡಾ ಹೇಳಲಾಗಿದೆ.
ಆಸ್ತಿ ಅಭಿವೃದ್ಧಿಗೆ ಸಂಬಂಧಿಸಿ ಪ್ರವೀಣ್ ರಾವತ್ನನ್ನು ಬಂಧಿಸಲಾಗಿದ್ದು ಅವರಿಗೆ ಜಾಮೀನು ಲಭಿಸಿತ್ತು.