ಮಂಗಳೂರು, ಜ 06 (DaijiworldNews/SM): ದಕ್ಷಿಣ ಕನ್ನಡ ಆರೋಗ್ಯ ಬುಲೆಟಿನ್ ಪ್ರಕಾರ ಜಿಲ್ಲೆಯಲ್ಲಿ ಬುಧವಾರ ಜಿಲ್ಲೆಯಲ್ಲಿ 42 ಹೊಸ ಕೊರೋನಾ ವೈರಸ್ ಪ್ರಕರಣಗಳು ವರದಿಯಾಗಿವೆ. ಈ ಪೈಕಿ 395 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ.
ಇನ್ನು ಜಿಲ್ಲೆಯಲ್ಲಿ ಒಟ್ಟು 5,07,956 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಅದರಲ್ಲಿ 4,74,876 ಮಂದಿಯ ವರದಿ ನೆಗೆಟಿವ್ ಆಗಿದೆ. ಇನ್ನು ಜಿಲ್ಲೆಯಲ್ಲಿ ಬುಧವಾರ 22 ಮಂಡಿ ಕೊರೋನಾ ಮುಕ್ತರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 31,953 ಕ್ಕೆ ತಲುಪಿದೆ. ಇನ್ನು ಈವರೆಗೆ ಜಿಲ್ಲೆಯಲ್ಲಿ ಒಟ್ಟು 732 ಸಾವುಗಳು ಸಂಭವಿಸಿವೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20,634 ಕ್ಕೂ ಹೆಚ್ಚು ಮುಖವಾಡ ಉಲ್ಲಂಘನೆ ವರದಿಯಾಗಿದ್ದು, 21,92,704 ರೂ.ಗಳ ದಂಡವನ್ನು ಅಧಿಕಾರಿಗಳು ಸಂಗ್ರಹಿಸಿದ್ದಾರೆ.
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಬುಧವಾರ 13 ಹೊಸ ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು ಕೊರೋನಾ ವೈರಸ್ ಪ್ರಕರಣಗಳ ಸಂಖ್ಯೆ 23,149ಕ್ಕೆ ಏರಿಕೆಯಾಗಿದೆ. ಈ ಪೈಕಿ 109 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ. ಈವರೆಗೆ 3,01,737 ಕ್ಕೂ ಹೆಚ್ಚು ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಅದರಲ್ಲಿ 2,78,588 ನಕಾರಾತ್ಮಕವಾಗಿವೆ.
ಇನ್ನು ಬುಧವಾರ 10 ರೋಗಿಗಳು ಬಿಡುಗಡೆ ಮಾದಲಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 22,851 ಕ್ಕೆ ಏರಿದೆ. ಈವರೆಗೆ ಜಿಲ್ಲೆಯಲ್ಲಿ ಒಟ್ಟು 189 ಸಾವುಗಳು ಸಂಭವಿಸಿವೆ.