ಮಂಗಳೂರು, ಜ 07 (DaijiworldNews/SM): ದಕ್ಷಿಣ ಕನ್ನಡ ಆರೋಗ್ಯ ಬುಲೆಟಿನ್ ಪ್ರಕಾರ, ಜಿಲ್ಲೆಯಲ್ಲಿ ಗುರುವಾರ 37 ಹೊಸ ಕೊರೋನಾ ವೈರಸ್ ಪ್ರಕರಣಗಳು ವರದಿಯಾಗಿವೆ. ಆ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 33,117 ಕ್ಕೆ ಏರಿಕೆಯಾಗಿದೆ. ಈ ಪೈಕಿ 395 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ.
ಇನ್ನು ಜಿಲ್ಲೆಯಲ್ಲಿ ಇಲ್ಲಿಯ ತನಕ ಒಟ್ಟು 5,12,679 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಅದರಲ್ಲಿ 4,79,562 ಮಂದಿಯ ವರದಿ ನೆಗೆಟಿವ್ ಆಗಿದೆ. ಇನ್ನು ಜಿಲ್ಲೆಯಲ್ಲಿ ಗುರುವಾರದಂದು ಏಳು ಜನರನ್ನು ಬಿಡುಗಡೆ ಮಾಡಲಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 31,960ಕ್ಕೆ ಏರಿಕೆಯಾಗಿದೆ. ಈವರೆಗೆ ಒಟ್ಟು 732 ಸಾವುಗಳು ಸಂಭವಿಸಿವೆ.
ಉಡುಪಿ ಜಿಲ್ಲೆಯ ಗುರುವಾರದ ಕೊರೋನಾ ವರದಿ:
ಗುರುವಾರ ಮೂರು ಹೊಸ ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು ಕೊರೋನಾ ವೈರಸ್ ಪ್ರಕರಣಗಳ ಸಂಖ್ಯೆ 23,153ಕ್ಕೆ ಏರಿಕೆಯಾಗಿದೆ. ಈ ಪೈಕಿ 93 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ. ಇಲ್ಲಿಯವರೆಗೆ 3,05,148 ಕ್ಕೂ ಹೆಚ್ಚು ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಅದರಲ್ಲಿ 2,81,995 ಮಂದಿಯ ವರದಿ ನೆಗೆಟಿವ್ ಆಗಿದೆ.
ಗುರುವಾರ 20 ರೋಗಿಗಳನ್ನು ಬಿಡುಗಡೆ ಮಾಡಲಾಗಿದೆ. ಆ ಮೂಲಕ ಜಿಲ್ಲೆಯಲ್ಲಿ ಒಟ್ಟು ಗುಣಮುಖರಾದವರ ಸಂಖ್ಯೆ 22,871ಕ್ಕೆ ಏರಿಕೆಯಾಗಿದೆ. ಈವರೆಗೆ ಒಟ್ಟು 189 ಸಾವುಗಳು ಸಂಭವಿಸಿವೆ.