ಲಖನೌ, ಜ 07 (DaijiworldNews/SM): ಅಪ್ರಾಪ್ತೆಯನ್ನು ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಕಾಮುಕನೊಬ್ಬ ಆಕೆಯ ಮೇಲೆ ಅತ್ಯಾಚಾರ ನಡೆಸಿದ ಘಟನೆ ನಡೆದಿದೆ. ಅಲ್ಲದೆ, ಬಳಿಕ ಅತ್ಯಾಚಾರದ ದೃಶ್ಯಗಳನ್ನು ಸೆರೆ ಹಿಡಿದು ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಮಾಡಿ ಅಟ್ಟಹಾಸ ಮೆರೆದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಉತ್ತರಪ್ರದೇಶದ ಫಿರೋಜಾಬಾದ್ ನಲ್ಲಿ ಈ ಘಟನೆ ನಡೆದಿದೆ. ಡಿಸೆಂಬರ್ 1ರಂದು ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸೆಯಲಾಗಿದೆ. ಈ ವೇಳೆ ಬಾಲಕಿಯನ್ನು ಎಳೆದೊಯ್ದ 28 ವರ್ಷದ ಅಲ್ಲಿ ಭುರಿ ಸಿಂಗ್ ಅತ್ಯಾಚಾರವೆಸಗಿದ್ದಾನೆ. ಅಲ್ಲದೆ ಬಳಿಕ ಆತನ ಸ್ನೇಹಿತ ಈ ವೀಡಿಯೋ ಮಾಡಿ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಮಾಡಿದ್ದಾನೆ.
ಅಲ್ಲದೆ ಈ ವಿಡಿಯೋ ತೋರಿಸಿ ಹಲವು ಬಾರಿ ಅತ್ಯಾಚಾರ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೆ ಕಾಮುಕರು ಇತ್ತೀಚೆಗಷ್ಟೆ ಮತ್ತೆ ಬಾಲಕಿಯನ್ನು ಕರೆದಿದ್ದಾರೆ. ಆದರೆ ಬಾಲಕಿ ಬರುವುದಿಲ್ಲ ಎಂದು ಹೇಳಿದ್ದಕ್ಕೆ ಕೋಪಗೊಂಡ ಕಾಮುಕರು ವಿಡಿಯೋ ವೈರಲ್ ಮಾಡಿದ್ದಾನೆ ಎಂದು ತಿಳಿದುಬಂದಿದ್ದು, ಪೊಲೀಸರು ವಿಚಾರಣೆ ತೀವ್ರಗೊಳಿಸಿದ್ದಾರೆ.