ನವದೆಹಲಿ, ಜ. 08 (DaijiworldNews/MB) : ''ಮೊದಲು ನರೇಂದ್ರ ಮೋದಿ ಅವರು ಕೊರೊನಾ ಲಸಿಕೆಯನ್ನು ಹಾಕಿಸಿಕೊಳ್ಳಲಿ'' ಎಂದು ರಾಷ್ಟ್ರೀಯ ಜನತಾದಳ ಪಕ್ಷದ (ಆರ್ಜೆಡಿ) ನಾಯಕ ತೇಜ್ ಪ್ರತಾಪ್ ಯಾದವ್ ಹೇಳಿದ್ದಾರೆ.
ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿರುವ ಕೋವ್ಯಾಕ್ಸಿನ್ ಲಸಿಕೆಗೆ ಕಾಂಗ್ರೆಸ್ ನಾಯಕರಾದ ಮನೀಶ್ ತಿವಾರಿ, ಶಶಿ ತರೂರ್, ಜೈರಾಮ್ ರಮೇಶ್, ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಸೇರಿದಂತೆ ಹಲವು ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ.
ಈ ಹಿನ್ನೆಲೆ ಪ್ರತಿಕ್ರಿಯೆ ನೀಡಿರುವ ಬಿಹಾರ ನಾಯಕ ತೇಜ್ ಪ್ರತಾಪ್, ''ಮೊದಲು ಪ್ರಧಾನಿ ಮೋದಿ ಕೊರೊನಾ ಲಸಿಕೆ ಹಾಕಿಸಿಕೊಳ್ಳಲಿ, ಬಳಿಕ ನಾವೂ ಹಾಕಿಸಿಕೊಳ್ಳುತ್ತೇವೆ'' ಎಂದು ಹೇಳಿದ್ದಾರೆ.
''ರಾಜ್ಯದಲ್ಲಿ ಕೊರೊನಾ ಲಸಿಕೆ ಹಾಕಲು ಎಲ್ಲ ರೀತಿಯ ಸಿದ್ದತೆ ಮಾಡಲಾಗಿದೆ'' ಈ ಹಿಂದೆ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಎಂದು ಹೇಳಿದ್ದರು.