ಕಾಸರಗೋಡು, ಜ.09 (DaijiworldNews/PY): ವ್ಯಕ್ತಿಯೋರ್ವ ತನ್ನ ಪತ್ನಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾನತ್ತೂರು ವಡಕ್ಕೇರದಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.
ಮೃತರನ್ನು ವಿಜಯನ್ (38) ಹಾಗೂ ಬೇಬಿ (32) ಎಂದು ಗುರುತಿಸಲಾಗಿದೆ.
ಪತ್ನಿಯನ್ನು ಗುಂಡಿಕ್ಕಿ ಹತ್ಯೆಗೈದ ಬಳಿಕ ವಿಜಯನ್ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೌಟುಂಬಿಕ ಕಲಹ ಕೃತ್ಯಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಸ್ಥಳಕ್ಕೆ ಅದೂರು ಠಾಣಾ ಪೊಲೀಸರು ಭೇಟಿ ನೀಡಿದ್ದಾರೆ.