ನವದೆಹಲಿ, ಜ.09 (DaijiworldNews/PY): ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿರುವ ನಟಿ ರಾಗಿಣಿ ಜಾಮೀನು ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರಕ್ಕೆ ಮುಂದೂಡಿದೆ.
ರಾಗಿಣಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾ.ಎಲ್ ನಾಗೇಶ್ವರ ರಾವ್ ನೇತೃತ್ವದ ಸುಪ್ರೀಂ ಕೋರ್ಟ್ನ ತ್ರಿಮೂರ್ತಿ ನ್ಯಾಯಪೀಠ ಹಾಗೂ ನ್ಯಾಯಮೂರ್ತಿಗಳಾದ ನವೀನ್ ಸಿನ್ಹಾ ಮತ್ತು ಮಲ್ಹೋತ್ರಾ ಅವರು ಮುಂದಿನ ವಾರಕ್ಕೆ ಮುಂದೂಡಿದರು.
ರಾಗಿಣಿ ಅವರು ಸಲ್ಲಿಸಿದ್ದ ಜಾಮೀನ ಅರ್ಜಿಯನ್ನು ರಾಜ್ಯ ಹೈಕೋರ್ಟ್ ಕೆಲವು ದಿನಗಳ ಹಿಂದೆ ವಜಾಗೊಳಿಸಿದ್ದು, ರಾಜ್ಯ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಗಿಣಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.
ಸಿಸಿಬಿ ಪರ ವಕೀಲರು ರಾಗಿಣಿ ಅವರು ಸಲ್ಲಿಸಿರುವ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಿದ್ದಾರೆ.
ತುಷಾರ್ ಮೆಹ್ತಾ ಅವರು ಸಿಸಿಬಿ ಪರ ವಾದ ಮಂಡಿಸಿದ್ದರು. ರಾಗಿಣಿ ಅವರಿಗೆ ಯಾವುದೇ ಕಾರಣಕ್ಕೂ ಕೂಡಾ ಜಾಮೀನು ನೀಡಬಾರದು ಎಂದು ಸರ್ಕಾರಿ ವಕೀಲರು ವಾದ ಮಂಡಿಸಿದ್ದರು.