ಬೆಂಗಳೂರು, ಜ.10 (DaijiworldNews/PY): "ಸಚಿವ ಸಂಪುಟ ವಿಸ್ತರಣೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ರಾಷ್ಟ್ರೀಯ ನಾಯಕರೊಂದಿಗೆ ಚರ್ಚೆ ನಡೆಸಲು ದೆಹಲಿಗೆ ತೆರಳುತ್ತಿದ್ದೇನೆ" ಎಂದು ಸಿಎಂ ಬಿಎಸ್.ಯಡಿಯೂರಪ್ಪ ತಿಳಿಸಿದರು.
ದೆಹಲಿಗೆ ತೆರಳುವ ಮುನ್ನ ಭಾನುವಾರ ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ ಈ ವಾರ ಸಚಿವ ಸಂಪುಟ ವಿಸ್ತರಣೆ ಆಗುತ್ತದೆಯೇ ಎಂದು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, "ಈ ಬಗ್ಗೆ ತಿಳಿದಿಲ್ಲ. ರಾಷ್ಟ್ರೀಯ ನಾಯಕರೊಂದಿಗೆ ನಾನು ಎಲ್ಲಾ ವಿಚಾರಗಳ ಬಗ್ಗೆ ಚರ್ಚಿಸುತ್ತೇನೆ" ಎಂದು ಹೇಳಿದರು.
"ಉಪ ಚುನಾವಣೆ ಲೋಕಸಭೆ ಹಾಗೂ ವಿಧಾನಸಭೆಯಲ್ಲಿ ಯಾರು ಅಭ್ಯರ್ಥಿ ಯಾರು ಆಗಬೇಕು ಎನ್ನುವ ವಿಚಾರದ ಬಗ್ಗೆ ಒಂದಷ್ಟು ಚರ್ಚಿಸುವುದು, ಗ್ರಾ.ಪಂ ಚುನಾವಣೆಯ ವಿಜಯದ ಬಗ್ಗೆ ಮಾಹಿತಿ ನೀಡುವುದು ಸೇರಿ ಹಲವು ವಿಚಾರಗಳ ಬಗ್ಗೆ ಹಿರಿಯ ನಾಯಕರೊಂದಿಗೆ ಚರ್ಚೆ ನಡೆಸಿ, ರಾತ್ರಿ ವಾಪಸ್ಸಾಗಲಿದ್ದೇನೆ" ಎಂದರು.