ಕೊಲ್ಕತ್ತಾ, ಜ.10 (DaijiworldNews/HR): "ಪಶ್ಚಿಮ ಬಂಗಾಳದಲ್ಲಿ ಯಾವುದೇ ಹಣವಿಲ್ಲದೇ ಉಚಿತವಾಗಿ ಎಲ್ಲ ಜನರಿಗೆ ಕೊರೊನಾ ಲಸಿಕೆ ನೀಡಲು ರಾಜ್ಯ ಸರ್ಕಾರ ಸಿದ್ಧತೆ ನಡೆಸುತ್ತಿದೆ" ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಜನವರಿ 16 ರಿಂದ ಭಾರತದಲ್ಲಿ ಕೊರೊನಾ ಲಸಿಕೆ ಆರಂಭಿಸಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದ್ದು, ಕೇರಳ, ತಮಿಳುನಾಡು, ಮಧ್ಯ ಪ್ರದೇಶ ಸೇರಿದಂತೆ ಅನೇಕ ರಾಜ್ಯಗಳು ಉಚಿತ ಕೊರೊನಾ ಲಸಿಕೆ ನೀಡುವುದಾಗಿ ಹೇಳಿದೆ.
ಇನ್ನು ಕೊರೊನಾ ಲಸಿಕೆಯನ್ನು ಮೊದಲ ಹಂತದಲ್ಲಿ ಮೂರು ಕೋಟಿ ಮುಂಚೂಣಿ ಕಾರ್ಯಕರ್ತರಿಗೆ, ನಂತರ 50 ವರ್ಷಕ್ಕೂ ಮೇಲ್ಪಟ್ಟ 27 ಕೋಟಿ ಜನರಿಗೆ ಲಸಿಕೆ ನೀಡಲಾಗುತ್ತದೆ.