ನವದೆಹಲಿ, ಜ.10 (DaijiworldNews/HR): ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಮಸೂದೆಯನ್ನು ವಿರೋಧಿ ಸಾವಿರಾರು ರೈತರು ಪ್ರತಿಭಟನೆ ನಡೆಸುತ್ತಿದ್ದು ಅದರಲ್ಲಿ 40 ವರ್ಷದ ರೈತನೊಬ್ಬ ವಿಷಪ್ರಾಶನ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮೃತಪಟ್ಟ ರೈತನನ್ನು ಅಮರಿಂದರ್ ಸಿಂಗ್(40 ) ಎಂದು ಗುರುತಿಸಲಾಗಿದೆ.
ಆತ್ಮಹತ್ಯೆ ಮಾಡಿಕೊಂಡ ರೈತನನ್ನು ಸೋನಿಪತ್ನ ಎಫ್ಐಎಂಎಸ್ ಆಸ್ಪತ್ರೆಗೆ ದಾಖಲಿಸಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಅಮರಿಂದರ್ ಸಿಂಗ್ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ.