ಹುಬ್ಬಳ್ಳಿ, ಜ.10 (DaijiworldNews/HR): ಎಲ್ಲರಿಗೂ ಸೂರು ತಲುಪಿಸುವ ಉದ್ದೇಶದಿಂದಾಗಿ ಕರ್ನಾಟಕದ ಎಲ್ಲಾ ಗ್ರಾಮ ಪಂಚಾಯ್ತಿಗಳಿಗೆ ತಲಾ 20 ಮನೆಗಳನ್ನು ನೀಡಲಿದ್ದು, ನೂತನ ಗ್ರಾಮ ಪಂಚಾಯ್ತಿ ಸದಸ್ಯರು ಅರ್ಹರಿಗೆ ಮನೆಗಳನ್ನು ಹಂಚುವ ಕೆಲಸ ಮಾಡಬೇಕು ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ.
ಈ ಕುರಿತು ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಜಯಗಳಿಸಿದ್ದ ಅಭ್ಯರ್ಥಿಗಳ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, "ಕೊರೊನಾದಿಂದಾಗಿ ರಾಜ್ಯ ಸರ್ಕಾರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಮನವೊಲಿಸಿ ಮುಂದಿನ ಬಜೆಟ್ನಲ್ಲಿ ಈ ಯೋಜನೆ ಜಾರಿಗೆ ತರುತ್ತೇನೆ" ಎಂದರು.
ಇನ್ನು "ಗ್ರಾಮ ಪಂಚಾಯ್ತಿ ಅಧ್ಯಕ್ಷ, ಉಪಾಧ್ಯಕ್ಷರು ಮತ್ತು ಸದಸ್ಯರು ಕೇಂದ್ರದಿಂದ ನೇರವಾಗಿ ಬರುವ ಹಣವನ್ನು ಸಮರ್ಥವಾಗಿ ಬಳಸಿಕೊಂಡರೆ ಯಾವ ಗ್ರಾ.ಪಂ.ಗಳಿಗೂ ರಾಜ್ಯದ ನೆರವು ಬೇಕಾಗುವುದೇ ಇಲ್ಲ" ಎಂದು ಹೇಳಿದ್ದಾರೆ.