ಕಾಸರಗೋಡು,ಜ.10 (DaijiworldNews/HR): ಸೀಮೆ ಎಣ್ಣೆ ಸೇವಿಸಿದ ಪರಿಣಾಮ ಒಂದೂವರೆ ವರ್ಷದ ಮಗು ಮೃತಪಟ್ಟ ದಾರುಣ ಘಟನೆ ಉದುಮದಲ್ಲಿ ನಡೆದಿದೆ.
ಉದುಮ ಏರೋಲ್ನ ದಾಸ್ ಮತ್ತು ರೇಣುಕಾ ದಂಪತಿ ಪುತ್ರ ಋತಿಕ್ ಮೃತಪಟ್ಟ ಮಗು.
ಮನೆಯಲ್ಲಿ ಆಟವಾಡುತ್ತಿದ್ದ ಮಗು ಅರಿಯದೆ ಬಾಟಲಿಯಲ್ಲಿದ್ದ ಸೀಮೆಎಣ್ಣೆಯನ್ನು ಸೇವಿಸಿದ್ದು , ಮಗು ಅಸ್ವಸ್ಥವಾಗಿ ಬಿದ್ದಿದ್ದು ಸಮೀಪ ಸೀಮೆ ಎಣ್ಣೆ ತುಂಬಿದ್ದ ಬಾಟಲಿ ಪತ್ತೆಯಾಗಿತ್ತು. ತಕ್ಷಣ
ಮಗುವನ್ನು ಉದುಮದ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು.
ಬಳಿಕ ವೈದ್ಯರ ಸಲಹೆಯಂತೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದೆ. ಪೈಂಟಿಂಗ್ಗಾಗಿ ಸೀಮೆ ಎಣ್ಣೆ ತರಲಾಗಿತ್ತು. ಮನೆ ವರಾಂಡದಲ್ಲಿಡಲಾಗಿದ್ದ ಸೀಮೆ ಎಣ್ಣೆ ಮಗು ಅರಿಯದೆ ಸೇವಿಸಿರಬಹುದು ಎಂದು ಶಂಕಿಸಲಾಗಿದೆ.