ಮಂಗಳೂರು, ಜ.10 (DaijiworldNews/HR): ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಬುಲೆಟಿನ್ ಪ್ರಕಾರ, ಜಿಲ್ಲೆಯಲ್ಲಿ ರವಿವಾರ 39 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 33,255ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಪ್ರಸ್ತುತ 465 ಪ್ರಕರಣಗಳು ಸಕ್ರಿಯವಾಗಿವೆ. ಒಟ್ಟು 5,25,292 ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಅದರಲ್ಲಿ 4,92,037 ಮಂದಿಯ ವರದಿ ನೆಗೆಟಿವ್ ಆಗಿದೆ. ರವಿವಾರ 32 ಜನರನ್ನು ಬಿಡುಗಡೆ ಮಾಡಲಾಗಿದೆ. ಇದುವರೆಗೆ ಒಟ್ಟು 732 ಸಾವುಗಳು ಸಂಭವಿಸಿವೆ.
ಉಡುಪಿ ಜಿಲ್ಲೆಯ ಇಂದಿನ ಕೊರೊನಾ ವರದಿ:
ರವಿವಾರ 6 ಹೊಸ ಪ್ರಕರಣಗಳು ಸೇರಿದಂತೆ ಜಿಲ್ಲೆಯ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ 23,195ಕ್ಕೆ ಏರಿಕೆಯಾಗಿದೆ. ಈ ಪೈಕಿ 99 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿದೆ. ಈವರೆಗೆ 3,12,456 ಕ್ಕೂ ಹೆಚ್ಚು ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಅದರಲ್ಲಿ 2,89,269 ಮಾದರಿಗಳು ನಕಾರಾತ್ಮಕವಾಗಿವೆ.
ರವಿವಾರ 9 ರೋಗಿಗಳನ್ನು ಬಿಡುಗಡೆ ಮಾಡಲಾಗಿದೆ. ಈವರೆಗೆ ಒಟ್ಟು 189 ಸಾವುಗಳು ಸಂಭವಿಸಿವೆ.