ಮೈಸೂರು, ಜ.11 (DaijiworldNews/PY): "ಸಚಿವ ಸ್ಥಾನ ನೀಡಿದರೆ ಉತ್ತಮವಾಗಿ ಕಾರ್ಯ ನಿರ್ವಹಿಸುವೆ. ಆದರೆ, ಸಚಿವ ಸ್ಥಾನ ಕೊಡುವುದು ಬಿಡುವುದು ಅವರಿಗೆ ಬಿಟ್ಟ ವಿಚಾರ" ಎಂದು ಕೊಳ್ಳೆಗಾಲ ಕ್ಷೇತ್ರದ ಬಿ.ಎಸ್.ಪಿ ಶಾಸಕ ಎನ್. ಮಹೇಶ್ ಹೇಳಿದ್ದಾರೆ.
ಮೈಸೂರಿನ ಸುತ್ತೂರಿನಲ್ಲಿ ಮಾತನಾಡಿದ ಅವರು, "ಸಚಿವ ಸ್ಥಾನದ ಆಕಾಂಕ್ಷೆ ಎಲ್ಲರಿಗೂ ಇದ್ದೇ ಇದೆ. ಒಂದು ವೇಳೆ ಸಚಿವ ಸ್ಥಾನ ನೀಡಿದರೆ ಉತ್ತಮವಾಗಿ ಕೆಲಸ ಮಾಡುತ್ತೇನೆ" ಎಂದಿದ್ದಾರೆ.
"ನನಗೆ ಸಚಿವ ಸ್ಥಾನ ಸಿಗುತ್ತದೋ ಅಥವಾ ಇಲ್ಲವೋ ಎಂಬುದು ನನಗೆ ತಿಳಿದಿಲ್ಲ. ಈ ವಿಚಾರವಾಗಿ ಚರ್ಚೆ ಕೂಡಾ ನಡೆದಿಲ್ಲ. ಆದರೆ. ಸಿಎಂ ಬಿಎಸ್.ಯಡಿಯೂರಪ್ಪ ಅವರೊಂದಿಗೆ ಇರುವ ತೀರ್ಮಾನ ನಾನು ಮಾಡಿದ್ದೇನೆ" ಎಂದು ತಿಳಿಸಿದ್ದಾರೆ.
"ನನ್ನ ಬೆಂಬಲ ಎಂದಿಗೂ ಕೂಡಾ ಬಿಜೆಪಿ ಸರ್ಕಾರಕ್ಕಿದೆ. ಒಂದು ವೇಳೆ ಸಚಿವ ಸ್ಥಾನ ನೀಡಿದ್ದೇ ಆದಲ್ಲಿ ನಾನು ಉತ್ತಮ ಆಡಳಿತ ನಡೆಸಿ ಕ್ಷೇತ್ರ ಹಾಗೂ ರಾಜ್ಯದ ಅಭಿವೃದ್ದಿ ಕಾರ್ಯ ಮಾಡುತ್ತೇನೆ. ಆದರೆ, ಸಚಿವ ಸ್ಥಾನ ಕೊಡುವುದು ಬಿಡುವುದು ಅವರಿಗೆ ಬಿಟ್ಟ ವಿಚಾರ’ ಎಂದಿದ್ದಾರೆ.