ನವದೆಹಲಿ,ಜ.11 (DaijiworldNews/HR): ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಮಸೂದೆಯನ್ನು ಕೇಂದ್ರ ಸರ್ಕಾರವು ನಿಲ್ಲಿಸದೇ ಹೋದರೆ, ನಾವು ಅದನ್ನು ತಡೆಹಿಡಿಯುತ್ತೇವೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
"ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆಗಳ ವಿರುದ್ಧ ರಾಜ್ಯಗಳು ದಂಗೆ ಏಳುತ್ತಿವೆ ಎಂದು ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬಡೆ ನೇತೃತ್ವದ ನ್ಯಾಯಪೀಠ ಕೇಂದ್ರಕ್ಕೆ ತಿಳಿಸಿದ್ದು, ಸರ್ಕಾರ ಪ್ರತಿಭಟನಾ ನಿರತರೊಂದಿಗೆ ನಡೆಸುತ್ತಿರುವ ಮಾತುಕತೆ ಪ್ರಕ್ರಿಯೆ ತೀವ್ರ ನಿರಾಸೆ ತಂದಿದೆ" ಎಂದು ಹೇಳಿದೆ.
ಇನ್ನು "ನಿಮ್ಮ ಮಾತುಕತೆಗಳ ಬಗ್ಗೆ ದಾರಿತಪ್ಪಿಸುವ ಅವಲೋಕನಗಳನ್ನು ಮಾಡಲು ನಾವು ಬಯಸುವುದಿಲ್ಲ. ಆದರೆ ಈ ಪ್ರಕ್ರಿಯೆ ಬಗ್ಗೆ ನಾವು ತೀವ್ರ ನಿರಾಶೆಗೊಂಡಿದ್ದೇವೆ" ಎಂದು ನ್ಯಾಯಮೂರ್ತಿಗಳಾದ ಎ ಎಸ್ ಬೋಪಣ್ಣ ಮತ್ತು ವಿ ರಾಮಸುಬ್ರಮಣಿಯನ್ ಅವರನ್ನೊಳಗೊಂಡ ಪೀಠ ಹೇಳಿದೆ.