ಕೋಲ್ಕತ್ತ, ಜ.11 (DaijiworldNews/HR): ಕೇಂದ್ರ ಸರ್ಕಾರ ಮೂರು ಮೂರು ರೈತ ವಿರೋಧಿ ಕಾಯ್ದೆಗಳನ್ನು ಹಿಂದಕ್ಕೆ ಪಡೆಯಬೇಕು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ 55 ನೇ ಪುಣ್ಯತಿಥಿಯಂದು ಗೌರವ ಸಲ್ಲಿಸಿ ಬಳಿಕ ಟ್ವೀಟ್ ಮಾಡಿದ ಅವರು, ಲಾಲ್ ಬಹದ್ದೂರ್ ಶಾಸ್ತ್ರಿಯವರು ಜೈ ಜವಾನ್, ಜೈ ಕಿಸಾನ್ ಎಂಬ ಸ್ಪೂರ್ತಿದಾಯಕ ಘೋಷಣೆಯನ್ನು ಕೊಟ್ಟು ಹೋಗಿದ್ದಾರೆ. ರೈತರು ಈ ದೇಶದ ಹೀರೊಗಳು. ಕೇಂದ್ರ ಸರ್ಕಾರ, ಈಗ ಜಾರಿಗೆ ತಂದಿರುವ ಮೂರು ರೈತ ವಿರೋಧಿ ಕಾಯ್ದೆಗಳನ್ನು ರದ್ದುಗೊಳಿಸಬೇಕು" ಎಂದಿದ್ದಾರೆ.
ಇನ್ನು " ದೆಹಲಿಯ ಗಡಿ ಭಾಗಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ತೃಣಮೂಲ ಕಾಂಗ್ರೆಸ್ ಬೆಂಬಲ ಸೂಚಿಸುತ್ತದೆ" ಎಂದು ಹೇಳಿದ್ದಾರೆ.