ಮುಂಬೈ,ಜ.11 (DaijiworldNews/HR): ಬಾಲಿವುಡ್ ನಟಿ ಕಂಗನಾ ರಣಾವತ್ ಮತ್ತು ಅವರ ಸಹೋದರಿ ರಂಗೋಲಿ ಚಾಂಡೇಲ್ ಅವರ ಬಂಧನದ ವಿರುದ್ಧ ನೀಡಿದ್ದ ಮಧ್ಯಂತರ ತಡೆಯನ್ನು ಬಾಂಬೆ ಹೈಕೋರ್ಟ್ ಜನವರಿ 25ವರೆಗೆ ವಿಸ್ತರಿಸಿದ್ದು, ಈ ಅವಧಿಯಲ್ಲಿ ವಿಚಾರಣೆಗಾಗಿ ಎಂದು ಅವರಿಗೆ ಸಮನ್ಸ್ ನೀಡದಂತೆ ನಗರ ಪೊಲೀಸರಿಗೆ ಬಾಂಬೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಕಂಗನಾ ರನೌತ್ ಮತ್ತು ಅವರ ಸಹೋದರಿ ರಂಗೋಲಿ ಚಾಂಡೇಲ್ ವಿರುದ್ಧ ಮುಂಬೈ ಪೊಲೀಸರು ದೇಶದ್ರೋಹ ಆರೋಪದಡಿ ಎಫ್ಐಆರ್ ದಾಖಲಿಸಿದ್ದರು. ಈ ಸಂಬಂಧ ಹೈಕೋರ್ಟ್ ಮೆಟ್ಟಿಲೇರಿದ್ದ ಕಂಗನಾಗೆ ಹೈಕೋರ್ಟ್ ಬಂಧನದಿಂದ ರಕ್ಷಣೆ ನೀಡಿತ್ತು.
ಇನ್ನು ಸಾಮಾಜಿಕ ಜಾಲತಾಣದಲ್ಲಿ ದ್ವೇಷ ಮತ್ತು ಕೋಮು ಪ್ರಚೋದನಕಾರಿ ಪೋಸ್ಟ್ಗಳನ್ನು ಹಂಚಿಕೊಂಡಿದ್ದಾರೆ ಎಂಬ ಆರೋಪದಡಿ ಎಫ್ಐಆರ್ ದಾಖಲಿಸುವಂತೆ ಬಾಂದ್ರಾ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಆದೇಶ ಹೊರಡಿಸಿತ್ತು.