ಮಂಗಳೂರು, ಜ.11 (DaijiworldNews/PY): ಮಂಗಳೂರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ತಮಿಳುನಾಡು ಮೂಲದ ಬೋಟ್ನಲ್ಲಿ ಸಿಲಿಂಡರ್ ಸ್ಪೋಟಗೊಂಡಿದ್ದು, ಬೋಟ್ನಲ್ಲಿದ್ದ 11 ಮಂದಿ ಮೀನುಗಾರರನ್ನು ರಕ್ಷಿಸಿದ ಕರಾವಳಿ ರಕ್ಷಣಾ ಪಡೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಭಿನಂದನೆ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, "ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕೆ ದೋಣಿಯಲ್ಲಿದ್ದ ಸಿಲಿಂಡರ್ ಸ್ಫೋಟವಾಗಿದ್ದು, ಭಾರತೀಯ ಕರಾವಳಿಯ ರಕ್ಷಣಾ ಪಡೆಯವರು ಎಲ್ಲಾ 11 ಮೀನುಗಾರರನ್ನು ರಕ್ಷಿಸಿದ್ದಾರೆ. ಮುಂಬೈನಿಂದ ಸಾಚೇತ್ ಮತ್ತು ಸುಜಿತ್ ಎಂಬೆರಡು ಕಾವಲು ನೌಕೆಗಳನ್ನು ತರಿಸಿ, ಮೀನುಗಾರರ ಜೀವ ಉಳಿಸಿದ ಭಾರತೀಯ ಕರಾವಳಿ ರಕ್ಷಣಾ ಪಡೆಯವರಿಗೆ ಅಭಿನಂದನೆಗಳು" ಎಂದಿದ್ದಾರೆ.
ಮಂಗಳೂರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ತಮಿಳುನಾಡು ಮೂಲದ ಬೋಟ್ನಲ್ಲಿ ಸಿಲಿಂಡರ್ ಸ್ಪೋಟಗೊಂಡಿದ್ದು, ಬೋಟ್ನಲ್ಲಿದ್ದ 11 ಮಂದಿ ಮೀನುಗಾರರನ್ನು ಕರಾವಳಿ ರಕ್ಷಣಾ ಪಡೆಯವರು ರಕ್ಷಿಸಿದ್ದರು.
ಮಂಗಳೂರಿನಿಂದ ಸುಮಾರು 140 ನಾಟಿಕಲ್ ಮೈಲ್ ದೂರದಲ್ಲಿ ಈ ಬೋಟ್ ಮೀನುಗಾರಿಯಲ್ಲಿ ತೊಡಗಿತ್ತು. ಈ ವೇಳೆ ಬೋಟ್ನಲ್ಲಿದ್ದ ಸಿಲಿಂಡರ್ ಏಕಾಏಕಿ ಸ್ಪೋಟಗೊಂಡಿತ್ತು. ವಿಷಯ ತಿಳಿದ ಕರಾವಳಿ ರಕ್ಷಣಾ ಪಡೆಯವರು ಕಾರ್ಯಾಚರಣೆಯಲ್ಲಿ ತೊಡಗಿದ್ದು, ಸಾಚೇತ್ ಹಾಗೂ ಸುಜಿತ್ ಎಂಬ ಕರಾವಳಿ ರಕ್ಷಣಾ ಪಡೆಯ ಬೋಟ್ಗಳು ನೆರವಾಗಿತ್ತು.