ಮೈಸೂರು, ಜ.11 (DaijiworldNews/HR): ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಮತ್ತೊಮ್ಮೆ ಮುಖ್ಯಮಂತ್ರಿ ಆಗುತ್ತೇವೆ ಎಂದು ಹೇಳಿಕೊಂಡು ಅವರಿಬ್ಬರೂ ಹಗಲು ಕನಸು ಕಾಣುತ್ತಿದ್ದಾರೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, "ಈ ಜನ್ಮದಲ್ಲಿ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗುವುದಿಲ್ಲ, ಜೆಡಿಎಸ್ ಅಧಿಕಾರಕ್ಕೆ ಬರುವುದಿಲ್ಲ.ಮುಖ್ಯಮಂತ್ರಿ ಬದಲಾವಣೆ ಎಂದು ಸುಮ್ಮನೆ ಮಾತನಾಡುತ್ತಾರೆ. ಇದು ಕೇವಲ ಸೃಷ್ಟಿ ಮಾಡಿರುವುದು ಅಷ್ಟೆ. ಕೇಂದ್ರ ನಾಯಕರು, ಶಾಸಕರು ಯಾರು ಹೇಳಿಲ್ಲ. ಇದನ್ನು ಹೇಳುತ್ತಿರುವುದು ಸಿದ್ದರಾಮಯ್ಯನವರು ಒಬ್ಬರೇ" ಎಂದರು.
ಇನ್ನು "ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ. ಈ ಸುಳ್ಳು ಸುದ್ದಿ ಕೇವಲ ಮಾಧ್ಯಮಗಳಲ್ಲಿ ಮಾತ್ರ ಬರುತ್ತಿರುವ ಸುದ್ದಿ ಅಷ್ಟೇ" ಎಂದು ಹೇಳಿದ್ದಾರೆ.