ಮಂಗಳೂರು, ಜ 11 (DaijiworldNews/SM): ರಾಜ್ಯದಲ್ಲಿ ಸಂಪುಟ ವಿಸ್ತರಣೆಗೆ ಕಸರತ್ತು ಜೋರಾಗಿದ್ದು, ಕ್ಷಣಗಣನೆ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಸಚಿವಾಕಾಂಕ್ಷಿಗಳ ಸಂಖ್ಯೆ ಕೂಡ ಹೆಚ್ಚಳವಾಗುತ್ತಿದೆ. ಈ ನಡುವೆ ಸುಳ್ಯ ಶಾಸಕ ಅಂಗಾರ ಅವರು ಕೂಡ ಸಚಿವ ಸ್ಥಾನದ ಅಕಾಂಕ್ಷೆ ವ್ಯಕ್ತಪಡಿಸಿದ್ದಾರೆ.
ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ ಎಂದ ಶಾಸಕ ಅಂಗಾರ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಈ ನಡುವೆ ನಾನು ಸಂಪುಟ ವಿಸ್ತರಣೆ ಬಗ್ಗೆ ಮಾತನಾಡುವುದಿಲ್ಲ. ಪಕ್ಷ ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ. ಪಕ್ಷ ಕೈಗೊಳ್ಳುವ ನಿರ್ಧಾರಕ್ಕೆ ನಾವು ಬದ್ದ ಎಂದು ಹಿರಿಯ ಶಾಸಕ ಅಂಗಾರ ಅವರು ಪ್ರತಿಕ್ರಿಯೆ ನೀಡಿದ್ದಾರೆ.