ಬಂಟ್ವಾಳ, ಜ 11 (DaijiworldNews/SM): ಗ್ರಾ.ಪಂ. ಚುನಾವಣೆಯ ವಿಜಯೋತ್ಸವ ಸಂದರ್ಭ ಉಜಿರೆಯಲ್ಲಿ ಪಾಕ್ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳದಲ್ಲಿ ಸಚಿವ ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್ ಈ ಕುರಿತು ಯಾಕೆ ಖಂಡಿಸಿಲ್ಲ ಎಂದು ಪ್ರಶ್ನಿಸಿದ್ದಾರೆ.
ಬಿಜೆಪಿ ಜನಸೇವಕ ಸಮಾವೇಶದ ಹಿನ್ನೆಲೆಯಲ್ಲಿ ಬಂಟ್ವಾಳಕ್ಕೆ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಸಚಿವರು ಮಾತನಾಡಿದರು. ದೇಶವಿರೋಧಿ ಘೋಷಣೆ ಕೂಗಿದ ಪ್ರಕರಣದ ಬಗ್ಗೆ ಕಾಂಗ್ರೆಸ್ ಖಂಡನೆ ವ್ಯಕ್ತಪಡಿಸಿಲ್ಲ. ದೇಶವಿರೋಧಿ ಆಟ ನಮ್ಮ ದೇಶದಲ್ಲಿ ನಡೆಯೊಲ್ಲ ಎಂದರು. ದೇಶದ್ರೋಹಿ ಚಟುವಟಿಕೆಗಳನ್ನು ಮಾಡುವವರ ವಿರುದ್ಧ ನಾವು ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಕಾಂಗ್ರೆಸ್ ನವರು ದೇಶವಿರೋಧಿಗಳಿಗೆ ಬೆಂಬಲ ಕೊಡುತ್ತಿದ್ದಾರೆ. ಹೀಗಾಗಿ ದೇಶವಿರೋಧಿಗಳಿಗೆ ಸೊಕ್ಕು ಬಂದಿದೆ. ಅಂತಹವರ ಸೊಕ್ಕನ್ನು ನಾವು ಮುರಿಯುತ್ತೇವೆ ಎಂದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ. ಕೆಲವೇ ತಿಂಗಳಲ್ಲಿ ಕಾಂಗ್ರೆಸ್ ಪಕ್ಷ ಧೂಳೀಪಟವಾಗಲಿದೆ ಎಂದರು.