ಮಂಗಳೂರು, ಜ 11 (DaijiworldNews/SM): ದಕ್ಷಿಣ ಕನ್ನಡ ಆರೋಗ್ಯ ಬುಲೆಟಿನ್ ಪ್ರಕಾರ ಜಿಲ್ಲೆಯಲ್ಲಿ ಸೋಮವಾರ 10 ಹೊಸ ಕೊರೋನಾ ವೈರಸ್ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 33,265ಕ್ಕೆ ಏರಿಕೆಯಾದೆ. ಈ ಪೈಕಿ 446 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ.
ಒಟ್ಟು 5,26,240 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಅದರಲ್ಲಿ 4,92,975 ನಾಕಾರಾತ್ಮಕವಾಗಿದೆ. ಸೋಮವಾರದಂದು 29 ಮಂದಿ ಗುಣಮುಖರಾಗಿದ್ದು, ಆ ಮೂಲಕ ಒಟ್ಟು ಗುಣಮುಖರಾದವರ ಸಂಖ್ಯೆ 32,087 ಕ್ಕೆ ತಲುಪಿದೆ. ಈವರೆಗೆ ಒಟ್ಟು 732 ಸಾವುಗಳು ಸಂಭವಿಸಿವೆ.
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಸೋಮವಾರದಂದು ನಾಲ್ಕು ಹೊಸ ಪ್ರಕರಣಗಳು ಸೇರಿದಂತೆ ಜಿಲ್ಲೆಯ ಕೊರೋನಾ ವೈರಸ್ ಪ್ರಕರಣಗಳ ಸಂಖ್ಯೆ 23,196ಕ್ಕೆ ಏರಿಕೆಯಾಗಿದೆ. ಈ ಪೈಕಿ 80 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ. ಇಲ್ಲಿಯವರೆಗೆ 3,14,095 ಕ್ಕೂ ಹೆಚ್ಚು ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಅದರಲ್ಲಿ 2,90,899 ಮಾದರಿಗಳು ನಕಾರಾತ್ಮಕವಾಗಿವೆ.
ಸೋಮವಾರ 20 ರೋಗಿಗಳನ್ನು ಬಿಡುಗಡೆ ಮಾಡಲಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 22,927 ಕ್ಕೆ ಏರಿಕೆಯಾಗಿದೆ. ಈವರೆಗೆ ಒಟ್ಟು 189 ಸಾವುಗಳು ಸಂಭವಿಸಿವೆ.