ಕಾಸರಗೋಡು, ಜ. 12 (DaijiworldNews/MB) : ಬಸ್ ಮತ್ತು ಬೈಕ್ ನಡುವೆ ಉಂಟಾದ ಅಪಘಾತದಲ್ಲಿ ಬೈಕ್ ಸವಾರರಾದ ಸೈನಿಕರೋರ್ವರು ಮೃತಪಟ್ಟ ಘಟನೆ ಸೋಮವಾರ ಸಂಜೆ ಪೆರಿಯ ಸಮೀಪ ನಡೆದಿದೆ.
ಪೆರಿಯದ ಶ್ರೀಹರಿ (24) ಮೃತಪಟ್ಟವರು.
ರಜೆಯಲ್ಲಿ ಊರಿಗೆ ಬಂದಿದ್ದ ಇವರು ಕ್ವಾರಂಟೈನ್ ಮುಗಿಸಿ ಬೈಕ್ನಲ್ಲಿ ಮನೆಗೆ ಬರುತ್ತಿದ್ದಾಗ ಪೆರಿಯ ಕೇಂದ್ರ ವಿದ್ಯಾಲಯದ ಮುಂಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದು ಈ ಅಪಘಾತ ನಡೆದಿದೆ. ಗಂಭೀರ ಗಾಯಗೊಂಡ ಶ್ರೀಹರಿಯವರನ್ನು ಆಸ್ಪತ್ರೆಗೆ ತಲುಪಿಸಿದರೂ ಜೀವ ಉಳಿಸಲಾಗಲಿಲ್ಲ.
ಬೇಕಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.