ಮೈಸೂರು, ಜ. 12 (DaijiworldNews/MB) : ''ರೈತರ ಹಿತಾಸಕ್ತಿ ರಕ್ಷಣೆಗೆ ನಮ್ಮಿಂದಾದ ಕಾರ್ಯ ಮಾಡಲಾಗುತ್ತದೆ. ಈ ಬಾರಿ ರೈತರ ಪರ ಬಜೆಟ್ ಮಂಡನೆ ಮಾಡಲಾಗುತ್ತದೆ'' ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಮೈಸೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ''ಈವರೆಗೆ ನಾವು 6 ಬಜೆಟ್ಗಳನ್ನು ಮಂಡಿಸಿದ್ದೇವೆ. ಕೊರೊನಾ ಹಿನ್ನೆಲೆ ರಾಜ್ಯದಲ್ಲಿ ಆರ್ಥಿಕ ಪರಿಸ್ಥಿತಿ ಉತ್ತಮವಾಗಿಲ್ಲ. ಆದರೂ ಕೂಡಾ ನಾವು ರೈತರಿಗಾಗಿ ಉತ್ತಮ ಯೋಜನೆ ರೂಪಿಸಿ ಬಜೆಟ್ ಮಂಡಿಸುತ್ತೇವೆ. ಈಗಾಗಲೇ ಪೂರ್ವಭಾವಿ ಸಭೆ ನಡೆಸಲಾಗುತ್ತಿದ್ದು ಆಯಾ ಇಲಾಖೆಗಳಿಂದ ಅಗತ್ಯತೆ ಬಗ್ಗೆ ಮಾಹಿತಿ ಪಡೆಯಲಾಗುತ್ತಿದೆ'' ಎಂದು ತಿಳಿಸಿದರು.
ಇದೇ ಸಂದರ್ಭ ಸಂಪುಟ ವಿಸ್ತರಣೆ ಖಚಿತ ಎಂದು ಹೇಳಿದ ಅವರು, ರಾಜ್ಯ ನಾಯಕತ್ವ ಬದಲಾಗಲಿದೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯನವರ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸಿದರು.