ಬೆಂಗಳೂರು, ಜ.12 (DaijiworldNews/HR): ಸಚಿವ ಸಂಪುಟಕ್ಕೆ ಹೊಸ ಸಚಿವರ ಸೇರ್ಪಡೆಗೆ ಮುಹೂರ್ತ ಸಿದ್ದವಾಗಿದ್ದು ಬುಧವಾರ ಸಂಜೆ ನಾಲ್ಕು ಗಂಟೆಗೆ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ.
ಈ ಕುರಿತು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಮಾಹಿತಿ ನೀಡಿದ್ದು, "ಬುಧವಾರ ಸಂಜೆ ನಾಲ್ಕು ಗಂಟೆಗೆ ಸಚಿವರ ಪದಗ್ರಹಣ ಕಾರ್ಯಕ್ರಮ ನಡೆಯಲಿದ್ದು, ನೂತನ ಸಚಿವರ ಪಟ್ಟಿ ನಾಳೆ ಬಿಡುಗಡೆ ಮಾಡಲಿದ್ದೇವೆ" ಎಂದು ತಿಳಿಸಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ ಅವರು ದೆಹಲಿಗೆ ತೆರಳಿ ವರಿಷ್ಠರೊಂದಿಗೆ ಮಾತುಕತೆ ನಡೆಸಿದ್ದು, ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ, ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಜೊತೆ ಚರ್ಚೆ ನಡೆಸಿದ್ದರು. ಅದೇ ದಿನ ಸಂಜೆ ಬೆಂಗಳೂರಿಗೆ ಮರಳಿದ ನಂತರ ಸಂಪುಟ ವಿಸ್ತರಣೆಯ ಬಗ್ಗೆ ಮಾಹಿತಿ ನೀಡಿದ್ದರು.