ನವದೆಹಲಿ,ಜ.12 (DaijiworldNews/HR): ಪೂರ್ವ ಲಡಾಖ್ನ ವಾಸ್ತವ ಗಡಿ ನಿಯಂತ್ರಣ ರೇಖೆಯ ಪ್ರದೇಶದಲ್ಲಿ ಎದುರಾಗಬಹುದಾದ ಎಂಥದ್ದೇ ಪರಿಸ್ಥಿತಿಯನ್ನು ಎದುರಿಸಲು ಭಾರತೀಯ ಸೇನಾ ಪಡೆಗಳು ಸನ್ನದ್ಧವಾಗಿವೆ ಎಂದು ಸೇನಾ ಮುಖ್ಯಸ್ಥ ಜನರಲ್ ಎಂ.ಎಂ ನರವಣೆ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಚೀನಾ ಮತ್ತು ಪಾಕಿಸ್ತಾನ ಎರಡೂ ಒಗ್ಗಟ್ಟಾಗಿ ರಾಷ್ಟ್ರೀಯ ಭದ್ರತೆಗೆ ಸವಾಲು ಒಡ್ಡುತ್ತಿದ್ದು, ಈ ವಿಷಯದಲ್ಲಿ ಎರಡೂ ರಾಷ್ಟ್ರಗಳ ನಡೆಯನ್ನು ಭಾರತ ಸುಲಭವಾಗಿ ಪರಿಗಣಿಸಲು ಸಾಧ್ಯವಿಲ್ಲ" ಎಂದು ಅಭಿಪ್ರಾಯಪಟ್ಟಿದ್ದಾರೆ.
ಇನ್ನು "ಭದ್ರತೆಯ ವಿಚಾರದಲ್ಲಿ ಚೀನಾ ಪೂರ್ವ ಲಡಾಖ್ನಲ್ಲಿನ ವಾಸ್ತವ ಗಡಿ ನಿಯಂತ್ರಣ ರೇಖೆ ಉದ್ದಕ್ಕೂ ನಿಯೋಜಿಸಿರುವ ಸೇನಾ ಪಡೆಗಳನ್ನು ಹಿಂದಕ್ಕೆ ಕರೆಸಿಕೊಳ್ಳುವ ವಿಚಾರದಲ್ಲಿ ಒಂದು ಒಪ್ಪಂದಕ್ಕೆ ಬರುವ ವಿಶ್ವಾಸವಿದೆ" ಎಂದು ಹೇಳಿದ್ದಾರೆ.