ರಾಯಚೂರು,ಜ.12 (DaijiworldNews/HR): 'ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದ್ದರೂ ಕೂಡ ಕುರುಬರಿಗೆ ಪರಿಶಿಷ್ಟ ಜಾತಿ ಮೀಸಲಾತಿ ಕೊಡಿಸಲು ಸಚಿವ ಈಶ್ವರಪ್ಪ ಹೋರಾಟ ಮಾಡುತ್ತೀರುವುದೇಕೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,"ಈ ಹೋರಾಟ ಈಶ್ವರಪ್ಪ ಮತ್ತು ಯಡಿಯೂರಪ್ಪ ನಡೆಯುತ್ತಿದೆಯೇ? ಸರ್ಕಾರದ ಮೇಲೆ ಒತ್ತಡ ಹೇರಿ ಮೀಸಲಾತಿ ಕೊಡಿಸುವುದಕ್ಕೆ ಆಗುವುದಿಲ್ಲವೆ? ನಾನು ಮುಖ್ಯಮಂತ್ರಿಯಾಗಿದ್ದಾಗ ನಾಲ್ಕು ಜಿಲ್ಲೆಗಳಲ್ಲಿ ಕುರುಬರಿಗೆ ಎಸ್ಟಿ ಮೀಸಲಾತಿ ಕೊಡಿಸಿದ್ದೇನೆ" ಎಂದರು.
ಇನ್ನು "ಈಗ ನಡೆಯುತ್ತಿರುವ ಮೀಸಲಾತಿ ಹೋರಾಟದ ಹಿಂದೆ ಆರ್ಎಸ್ಎಸ್ ಕೈವಾಡ ಇರುವುದರಿಂದಲೇ ನಾನು ವಿರೋಧಿಸುತ್ತಿದ್ದೇನೆ, ಕುರುಬರಿಗೆ ಎಸ್ಟಿ ಮೀಸಲಾತಿ ನೀಡುವುದಕ್ಕೆ ನನ್ನ ವಿರೋಧವಿಲ್ಲ. ರಾಜ್ಯದಲ್ಲಿ ಕುಲಶಾಸ್ತ್ರ ಅಧ್ಯಯನ ಆರಂಭಿಸಿ ಒಂದು ವರ್ಷವಾದರೂ ಏಕೆ ಪೂರ್ಣವಾಗುತ್ತಿಲ್ಲ. ಈ ಹೋರಾಟದ ಮೂಲಕ ಕುರುಬ ಸಮಾಜ ಒಡೆಯುವ ಪ್ರಯತ್ನ ಮಾಡಲಾಗುತ್ತಿದೆ" ಎಂದು ಹೇಳಿದ್ದಾರೆ.