ಮಂಗಳೂರು, ಜ 12 (DaijiworldNews/SM): ಬುಧವಾರ ರಾಜ್ಯ ಸರಕಾರದ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ಈ ಹಿನ್ನೆಲೆಯಲ್ಲಿ ಶಾಸಕ ಅಂಗಾರ ಅವರು ಮಂಗಳವಾರ ಸಂಜೆ ಬೆಂಗಳೂರಿಗೆ ತೆರಳಲಿದ್ದಾರೆ.
ಶಾಸಕರನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ಫೋನ್ ಮಾಡಿ ಬುಧವಾರ ಸಚಿವ ಸಂಪುಟ ವಿಸ್ತರಣೆಯಾಗಲಿದೆ ತಾವು ಹಾಜರಾಗುವಂತೆ ತಿಳಿಸಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ. ಏಳು ಮಂದಿ ಹಿರಿಯ ಶಾಸಕರಿಗೆ ಸಚಿವ ಸಂಪುಟದಲ್ಲಿ ಸ್ಥಾನ ದೊರೆಯಲಿದ್ದು ಇದರಲ್ಲಿ ಅಂಗಾರರ ಹೆಸರು ಇದೆ ಎಂದು ಹೇಳಲಾಗುತ್ತಿದೆ.