ಮಂಗಳೂರು, ಜ 12 (DaijiworldNews/SM): ದಕ್ಷಿಣ ಕನ್ನಡ ಆರೋಗ್ಯ ಬುಲೆಟಿನ್ ಪ್ರಕಾರ ಜಿಲ್ಲೆಯಲ್ಲಿ ಮಂಗಳವಾರ 24 ಹೊಸ ಕೊರೋನಾ ವೈರಸ್ ಪ್ರಕರಣಗಳು ವರದಿಯಾಗಿದ್ದು, ಈ ಸಂಖ್ಯೆ 33,289ಕ್ಕೆ ಏರಿಕೆಯಾಗಿದೆ. ಈ ಪೈಕಿ 427 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ.
ಜಿಲ್ಲೆಯಲ್ಲಿ ಒಟ್ಟು 5,30,743 ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಅದರಲ್ಲಿ 4,97,454 ಮಂದಿಯ ವರದಿ ನೆಗೆಟಿವ್ ಆಗಿದೆ. ಮಂಗಳವಾರ 43 ಜನರನ್ನು ಬಿಡುಗಡೆ ಮಾಡಲಾಗಿದ್ದು, ಒಟ್ಟು ಬಿಡುಗಡೆಯಾದವರ ಸಂಖ್ಯೆ 32,130ಕ್ಕೆ ತಲುಪಿದೆ. ಈವರೆಗೆ ಒಟ್ಟು 732 ಸಾವುಗಳು ಸಂಭವಿಸಿವೆ.
ಉಡುಪಿ ಜಿಲ್ಲೆಯ ಕೊರೋನಾ ವರದಿ:
ಮಂಗಳವಾರದಂದು ಜಿಲ್ಲೆಯಲ್ಲಿ ಮೂರು ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 23,199ಕ್ಕೆ ಏರಿಕೆಯಾಗಿದೆ. ಈ ಪೈಕಿ 59 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ. ಈವರೆಗೆ 3,15,764 ಕ್ಕೂ ಹೆಚ್ಚು ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಅದರಲ್ಲಿ 2,92,565 ಮಾದರಿಗಳು ನಕಾರಾತ್ಮಕವಾಗಿವೆ. ಮಂಗಳವಾರ 24 ರೋಗಿಗಳನ್ನು ಬಿಡುಗಡೆ ಮಾಡಲಾಗಿದೆ.ಆ ಮೂಲಕ ಒಟ್ಟು ಗುಣಮುಖರಾದವರ ಸಂಖ್ಯೆ 22,951 ಕ್ಕೆ ಏರಿಕೆಯಾಗಿದೆ. ಈವರೆಗೆ ಒಟ್ಟು 189 ಸಾವುಗಳು ಸಂಭವಿಸಿವೆ.