ಬೆಂಗಳೂರು, ಜ. 13 (DaijiworldNews/MB) : ಜನವರಿ 28ರಿಂದ ಫೆಬ್ರವರಿ 5ರವರೆಗೆ ವಿಧಾನಮಂಡಲದ ಜಂಟಿ ಅಧಿವೇಶನ ನಡೆಸಿ, ಬಳಿಕ ಮಾರ್ಚ್ನಲ್ಲಿ ಬಜೆಟ್ ಅಧಿವೇಶನ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಬಾಲಗಂಗಾಧರಮಾಥ ಸ್ವಾಮೀಜಿ ಅವರ ಹುಟ್ಟೂರು ಬಾನಂದೂರಿನಲ್ಲಿ ಸಾಂಸ್ಕೃತಿಕ ಮತ್ತುಪಾರಂಪರಿಕ ಕೇಂದ್ರ ನಿರ್ಮಾಣಕ್ಕಾಗಿ 25 ಕೋಟಿ ರೂ. ವೆಚ್ಚದ ಯೋಜನೆಗೆ ಸಂಪುಟ ಅಸ್ತು ಎಂದಿದೆ. ಸಂಪುಟವು ಬಿಬಿಎಂಪಿ ಹೊರತುಪಡಿಸಿ ರಾಜ್ಯದ ಎಲ್ಲ ನಗರಪಾಲಿಕೆ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿ ತೆರಿಗೆ ಪರಿಷ್ಕರಣೆಗೆ ಸಮ್ಮತಿಸಿದೆ. ಹಾಗೆಯೇ ಸ್ಥಳೀಯ ಸಂಸ್ಥೆಗಳಲ್ಲಿ ವಸತಿ ಕಟ್ಟಡಗಳ ಆಸ್ತಿ ತೆರಿಗೆ 0.2ರಿಂದ 1.5ಕ್ಕೆ ಆಸ್ತಿ ತೆರಿಗೆ ಹೆಚ್ಚಳಕ್ಕೂ ಒಪ್ಪಿಗೆ ನೀಡಿದೆ. 1000 ಚದರ ಅಡಿಗಿಂತ ಕಡಿಮೆ ವಿಸ್ತೀರ್ಣದ ನಿವೇಶನಕ್ಕೆ ತೆರಿಗೆ ವಿನಾಯತಿ ನೀಡಲಾಗಿದೆ.